• Thu. May 2nd, 2024

PLACE YOUR AD HERE AT LOWEST PRICE

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡರ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯಲ್ಲಿರುವ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಜಿತೆಗೆ ಕೋಲಾರ  ತಾಲ್ಲೂಕು ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ಕಚೇರಿಯಲ್ಲಿಯೂ  ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ಸಹ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಲೂರು ಶಾಸಕ ನಂಜೇಗೌಡರಿಗೆ ಸೇರಿದ ಒಟ್ಟು ನಾಲ್ಕು ಜಾಗಗಳಲ್ಲಿ ಪರಿಶೀಲನೆ ಮಡೆಯುತ್ತಿದೆ. ಇತ್ತೀಚೆಗೆ ಕೋಚಿಮುಲ್ ನ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಸದ್ದು ಮಾಡಿತ್ತು.

ನೇಮಕಾತಿ ವಿಚಾರದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಅರೋಪ‌ ಹಿನ್ನಲೆಯಲ್ಲಿ ಇಂದು ಬೆಳಗಿನಜಾವ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಜೊತೆಗೆ ಶಾಸಕ ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್ ಮನೆ ಎಂಡಿ ಗೋಪಾಲ್ ಮೂರ್ತಿ ಮನೆ ಮೇಲೂ ದಾಳಿ ನಡೆದಿದ್ದು ಪರಿಶೀಲನೆ ನಡೆಯುತ್ತಿದೆ. 

ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್ ರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ, ಮಾಲೂರು ಕೋಚಿಮುಲ್ ಕಚೇರಿ, ಬೆಂಗಳೂರಿನ ನಿವಾಸ ಸೇರಿ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!