• Wed. Sep 18th, 2024

PLACE YOUR AD HERE AT LOWEST PRICE

ಕೋಲಾರ, ಜ.೨೭ : ಕೊನೆಗೂ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಗಣರಾಜ್ಯೋತ್ಸವ ದಿನದಂದು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ೩೬ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಅಧಿಕೃತವಗಿ ಪ್ರಕಟಿಸಿದ್ದಾರೆ.

ಸಚಿವ ಸಂಪುಟ ರಚನೆಯಲ್ಲಿ ಕೋಲಾರ ಜಿಲ್ಲೆಗೆ ಅನ್ಯಾಯವಾಗಿದೆ ಎಂಬ ಕೂಗು ಇದ್ದು ಜಿಲ್ಲಾ ಕಾಂಗ್ರೆಸ್ ಪಾಳಯದ ಒಳಗೆ ಅಸಮದಾನ ಹೊಗೆಯಾಡುತ್ತಿತ್ತು. ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಕೆ.ಜಿ.ಎಫ್ ಶಾಸಕಿ ರೂಪಕಲಾ ಶಶಿಧರ್, ಹಾಗೂ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ತೀವ್ರ ಒತ್ತಡದ ಸಂದರ್ಭದಲ್ಲೂ ಸತತ ಮೂರು ಬಾರಿ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ನಾಯಕರಾಗಿ ಬೆಳೆಯುತ್ತಿರುವ ಎಸ್.ಎನ್. ನಾರಾಯಣಸ್ವಾಮಿ ಈ ಹಿಂದೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದರು. ಆದರೆ, ಬಾರಿ ಬಹುಮತದೊಂದಿಗೆ ೧೩೬ ಸ್ಥಾನ ಪಡೆದು ಸರ್ಕಾರ ರಚನೆ ಮಾಡಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದರು.

ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತ ಅಧ್ಯಕ್ಷರಾಗಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಯವರು ಹಾಗೂ ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾಗಿ ಕೆ.ಜಿ.ಎಫ್ ಶಾಸಕಿ ರೂಪಕಲಾ ಎಂ. ಶಶಿಧರ್ ಅವರನ್ನು ನೇಮಕಮಾಡಲಾಗಿದೆ. ಮುಖ್ಯಮಂತ್ರಿಗಳ ಈ ನಿರ್ಣಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದ0ತಾಗಿದೆ.

ಜಿಲ್ಲೆಯ ಇಬ್ಬರು ಶಾಸಕರಿಗೆ ಈಗ ಸಿಕ್ಕಿರುವ ಈ ಅವಕಾಶ ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳಿಗೆ ನಾಂದಿ ಹಾಡುತ್ತದೆ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕಾಯುತ್ತಿದ್ದಾರೆ

Leave a Reply

Your email address will not be published. Required fields are marked *

You missed

error: Content is protected !!