• Sun. May 5th, 2024

PLACE YOUR AD HERE AT LOWEST PRICE

ಬಂಗಾರಪೇಟೆ:೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇವರು ಭಾರತೀಯ ಯೋಧ ಎಂಬ ಹೆಸರು ಪಡೆದವರು ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಹಾಗೂ ಮಡಿವಾಳ ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮೈಲಿಗೆಯನ್ನು ಮಡಿ ಮಾಡುವಂತಹ ವೃತ್ತಿಯಲ್ಲಿ ಜನಿಸಿದ ತಳ ಸಮುದಾಯದ ಒಬ್ಬ ವ್ಯಕ್ತಿ ೧೨ನೇ ಶತಮಾನದಲ್ಲಿನ ಸಮಾಜದಲ್ಲಿದ್ದ ಕೆಲವು ಕೆಟ್ಟ ಮನಸ್ಥಿತಿಗಳ ಮನಸ್ಸುಗಳನ್ನು ತೊಳೆಯುವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದಾರೆ ಎಂದು ಹೇಳಿದರು.

ಈ ಸಮಾಜವನ್ನು ಸರಿ ದಾರಿಯಲ್ಲಿ ತರಬೇಕೆಂಬ ಆಶಯದಂತೆ ಅದು ಎಲ್ಲಾ ಸಮುದಾಯದವನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕೆಂದು ಬಸವಣ್ಣನವರ ಆಶಯದಂತೆ ಮಾಚಿದೇವರು ಸಹ ಶ್ರಮಪಟ್ಟಂತವರು. ಈಗಿನ ನಮ್ಮ ಸಮಾಜದಲ್ಲಿ ನಾವೆಲ್ಲರೂ ಉತ್ತಮ ಬಟ್ಟೆಯನ್ನು ಹಾಕಿಕೊಂಡು ಬರುತ್ತೇವೆ ಎಂದರೆ ಅದಕ್ಕೆ ಮೂಲ ಕಾರಣಕಾರರು ಮಡಿವಾಳ ಸಮಾಜದವರು ಎಂದು ಹೇಳಿದರು.

ಈ ಸಮಾಜದ ಎಲ್ಲರೂ ವರ್ಷಕ್ಕೊಮ್ಮೆ ಮಾಚಿದೇವರನ್ನು ನೆನೆಯಬೇಕು ಎಂದು ಹೇಳಿ ಈ ಜಯಂತಿಯನ್ನು ತಂದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಮುಖ್ಯಮಂತ್ರಿಗಳಿಗೆ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರು, ದಲಿತ ಸಮುದಾಯಗಳೆಂದರೆ ಪಂಚಪ್ರಾಣ ಎಂದರು. ದೇವರಾಜ್ ಅರಸು ರವರ ನಂತರ ಹಿಂದುಳಿದ ಸಮಾಜದ ಬಗ್ಗೆ ಹಾಗೂ ಬಡವರು, ದಲಿತರ ಬಗ್ಗೆ ಕನಿಕರ ತೋರಿಸುವವರು ನಮ್ಮ ಸಿದ್ದರಾಮಯ್ಯನವರು ಮಾತ್ರ ಎಂದು ಹೇಳಿದರು.

ಸಿ.ಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಬಡವರಿಗಾಗಿ ೫ ಯೋಜನೆಗಳನ್ನು ನೀಡಿದ್ದಾರೆ. ಇದರಿಂದ ಬಹಳಷ್ಟು ಕುಟುಂಬಗಳು ನೆಮ್ಮದಿಯಿಂದ ಜೀವನ ಮಾಡಲು ಸಹಾಯವಾಗಿದೆ ಎಂದರು. ಈಗ ನೀವು ನಿರ್ಮಿಸಿರು ಸಂಘದ ಕಟ್ಟಡದ ಮೇಲೆ ಮತ್ತೊಂದು ಕಟ್ಟಡ ನಿರ್ಮಿಸಲು ನನ್ನ ಅನುದಾನದಿಂದ ೫ ಲಕ್ಷ ನೀಡುತ್ತೇನೆ ಎಂದು ಭರವಸೆ ನೀಡಿ, ಹಾಗೂ ಶಾಸಕರ ಟ್ರಸ್ಟ್ ವತಿಯಿಂದ ಮಡಿವಾಳ ಸಮುದಾಯದ ೨೫ ಜನಕ್ಕೆ ಇಸ್ತ್ರಿ ಪೆಟ್ಟಿಗೆ ನೀಡುತ್ತೇನೆ ಎಂದು ಹೇಳಿದರು.

ಮಡಿವಾಳ ಸಂಘದ ಅಧ್ಯಕ್ಷರಾದ ಗೋವಿಂದಪ್ಪ ಮಾತನಾಡಿ, ಮಡಿವಾಳದವರು ತಳ ಸಮುದಾಯದ ಒಂದು ವರ್ಗವಾಗಿದೆ. ಈ ವರ್ಗದವರಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಉದ್ಯೋಗ ಮತ್ತು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ನಿರ್ಮಿಸಿ ಕೊಡಿ ಎಂದು ತಿಳಿಸಿದರು.ಹಾಗೂ ಸಮುದಾಯದ ವಿವಿಧ ಬೇಡಿಕೆಗಳನ್ನು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ಬಿಇಓ ಸುಕನ್ಯ ಪುರಸಭೆ ಸದಸ್ಯರಾದ ವೆಂಕಟೇಶ್, ಗೋವಿಂದ, ಶಫಿ, ಮಾಜಿ ಅಧ್ಯಕ್ಷೆ ಭಾಗ್ಯಮ್ಮ ಹಾಗೂ ಸಮುದಾಯದ ಮುಖಂಡರು ಸಿದ್ದನಹಳ್ಳಿ ವೆಂಕಟೇಶ್, ಬೇಕರಿ ಶ್ರೀನಿವಾಸ್, ಪರವನಹಳ್ಳಿ ವೆಂಕಟೇಶ್, ಶಿಕ್ಷಕ ಶ್ಯಾಮ್ ಮೂರ್ತಿ ಮೊದಲಾದವರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!