• Sat. Apr 27th, 2024

PLACE YOUR AD HERE AT LOWEST PRICE

ಬಂಗಾರಪೇಟೆ, ಫೆ.೧೬ : ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಭಾರತದ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಂವಿಧಾನವನ್ನು ಅನುಸರಿದಾಗ ಮಾತ್ರ ಸಂವಿಧಾನ ಬರೆದಿದ್ದಕ್ಕೆ ಸಾರ್ಥಕತೆ ಇರುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸೂಲಿಕುಂಟೆ ಗ್ರಾಮ ಪಂಚಾಯ್ತಿಯಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ಸಂವಿಧಾನದ ಸಮಗ್ರ ಆಶಯಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಪೀಠಿಕೆಯಲ್ಲೇ ಅರ್ಥವಾಗುವಂತೆ ತಿಳಿಸಿದ್ದಾರೆ. ಅವರು ಈ ದೇಶದ ಸಮಸ್ತ ಪ್ರಜೆಗೂ ಸಾಮಾಜಿಕ ಆರ್ಥಿಕ ರಾಜಕೀಯ ನ್ಯಾಯ, ಅಭಿವ್ಯಕ್ತಿ ಮತ್ತು ಧಾರ್ಮಿಕ ಸ್ವಾತಂತ್ಯ ಹಾಗೂ ಸಮಾನತೆಯ ಅವಕಾಶವನ್ನು ಸಂವಿಧಾನದ ಅಡಿಯಲ್ಲಿ ಒದಗಿಸಲಾಗಿದೆ. ಸಂವಿಧಾನ ಅಂಗೀಕಾರವಾಗಿ ೭೫ ವರ್ಷಗಳ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ನಡೆಸುತ್ತಿದ್ದು, ಈ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ರಷ್ಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್, ಹಿರಿಯ ದಲಿತ ಮುಖಂಡ ಡಾ.ಎಂ.ಚಂದ್ರಶೇಖರ್ ಮಾತನಾಡಿದರು.

ಇದಕ್ಕೂ ಮುನ್ನ ಸಂವಿಧಾನ ಜಾಗೃತಿ ಜಾಥಾ ಬಂಗಾರಪೇಟೆ ಗಡಿ ವ್ಯಾಪ್ತಿಗೆ ಸಮೀಪಿಸುತ್ತಿದ್ದಂತೆ ತಹಶೀಲ್ದಾರ್ ರಶ್ಮಿ ನೇತೃತ್ವದಲ್ಲಿ ತಾಲ್ಲೂಕು ಆಡಳಿತ ಮತ್ತು ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಯಲುವಹಳ್ಳಿಯಿಂದ ಬೈಕ್ ರ್ಯಾಲಿ ನಡೆಸಿದರು. ಸಂಜೆ ವೇಳೆಗೆ ಸೂಲಿಕುಂಟೆಗೆ ಆಗಮಿಸಿದರು. ಜಾಥಾ ಗ್ರಾಮ ಪ್ರವೇಶ ಮಾಡುತ್ತಿದ್ದಂತೆ ಸ್ವಾಗತಕ್ಕಾಗಿ ನೆರೆದಿದ್ದ ನೂರಾರು ಶಾಲಾ ವಿದ್ಯಾರ್ಥಿಗಳಿಂದ ಹೂ ಮಳೆಯನ್ನು ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು ಹಾಗೂ ಸ್ತ್ರೀಶಕ್ತಿ ಸಂಘಗಳ ಮಹಿಳೆಯರು ಪೂರ್ಣ ಕುಂಭ ಕಳಶ ಹೊತ್ತು ತಮಟೆ ವಾಧನಗಳ ಸಂಗೀತದೊಂದಿಗೆ ಸ್ವಾಗತಿಸಿದರು. ದಲಿತ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಪಟಾಕಿ ಸಿಡಿಸಿ ಸಂಭ್ರಮದಿಂದ ಬರಮಾಡಿಕೊಂಡರು. ಜಾಗೃತಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾದ ಕ್ರಾಂತಿ ಗೀತೆಗಳು ಮೂಡಿ ಬಂದವು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶಿವಾರೆಡ್ಡಿ, ಸೂಲಿಕುಂಟೆ ಗ್ರಾ.ಪಂ.ಅಧ್ಯಕ್ಷೆ ಸುಗುಣ ಮಂಜುನಾಥ್, ಉಪಾಧ್ಯಕ್ಷೆ ನಾಗಮ್ಮ, ಪಿ.ಡಿ.ಒ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ ಸೂಲಿಕುಂಟೆ ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸಿದ್ದನಹಳ್ಳಿ ಯಲ್ಲಪ್ಪ, ಶ್ರೀನಿವಾಸ್, ಹುಣಸನಹಳ್ಳಿ ವೆಂಕಟೇಶ್, ಸೂಲಿಕುಂಟೆ ಆನಂದ್, ದಸಂಸ ಮುನಿರಾಜು, ವೆಂಕಟರಾಜು, ಗ್ರಂಥಾಲಯ ಮೇಲ್ವಿಚಾರಕಿ ಪ್ರಜ್ವಲಾ,, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!