• Sat. May 4th, 2024

ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣಕ್ಕೆ ಆಗಮಿಸಿದ ವೇಳೆ ಮಾದಿಗ ದಂಡೋರ ನಾಯಕ ಮಂದ ಕೃಷ್ಣ ಮಾದಿಗ ಅವರಿಗೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ-ಬಸವರಾಜ್ ಕೌತಾಳ್

PLACE YOUR AD HERE AT LOWEST PRICE

 

ಕೋಲಾರ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣ ವಿಷಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಕಾರಣ ಫೆ.೨೭ಕ್ಕೆ ನಿಗಧಿಯಾದ ದೆಹಲಿ ಚಲೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಸಂಚಾಲಕ ಬಸವರಾಜ್ ಕೌತಾಳ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಒಳಮೀಸಲಾತಿ ವಿಷಯ ಸುಪ್ರೀಂ ಕೋರ್ಟ್ನಲ್ಲಿ ೩ ದಿನಗಳ ಕಾಲ ಚರ್ಚೆಯಾಗಿದೆ. ತೀರ್ಪು ಇನ್ನೂ ಪ್ರಕಟವಾಗಿಲ್ಲ. ತೀರ್ಪು ಪ್ರಕಟವಾಗದೇ ಇರುವ ಹಿನ್ನಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕಟ ಹಮ್ಮಿಕೊಂಡಿದ್ದ ದೆಹಲಿ ಚಲೋ ಕಾರ್ಯಕ್ರಮ ಮುಂದೂಡಲಾಗಿದೆ. ಸುಪ್ರೀಂ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೀಸಲಾತಿ ವರ್ಗೀಕರಣ ಕುರಿತು ಕಳದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣಕ್ಕೆ ಆಗಮಿಸಿದ ವೇಳೆ ಮಾದಿಗ ದಂಡೋರ ನಾಯಕ ಮಂದ ಕೃಷ್ಣ ಮಾದಿಗ ಅವರಿಗೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ. ಆದರೆ, ಆರ್ಥಿಕವಾಗಿ ದುರ್ಬಲ ವರ್ಗದವರಿಗಾಗಿ ಇ.ಡಬ್ಲ್ಯುಎಸ್. ಮೀಸಲಾತಿಯನ್ನು ರಾತ್ರೋ ರಾತ್ರಿ ಕೆಲಸ ಮಾಡಿ ಕೇವಲ ೨೪ ಗಂಟೆಗಳಲ್ಲಿ ನಿರ್ಣಯಿಸಲಾಗಿತ್ತು. ಆದರೆ, ಒಳಮೀಸಲಾತಿ ವಿಷಯದಲ್ಲಿ ಮಾತ್ರ ಪ್ರಧಾನಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿಲ್ಲ ಎಂದು ದೂರಿದರು.

ಕಳೆದ ೩೦ ವರ್ಷಗಳಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ವಿರೋಧ ಪಕ್ಷ ನಾಯಕ ಮಲ್ಲಿಖಾರ್ಜುನ ಖರ್ಗೆಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಮಾತನಾಡಿ, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಷಯ ನ್ಯಾಯಾಲಯದಲ್ಲಿ ತೀರ್ಪಿನ ಹಂತದಲ್ಲಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಸಹ ಮುಗಿದಿದ್ದು, ಇನ್ನೂ ದೆಹಲಿ ಚಲೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಲೋಕಸಭಾ ಚುನಾವಣೆ ಮುಕ್ತಾಯದ ವೇಳೆಗೆ ಸುಪ್ರೀಂ ತೀರ್ಪು ಹೊರಬೀಳಲಿದ್ದು, ತೀರ್ಪು ನೋಡಿಕೊಂಡು ಅವಶ್ಯವಾಗಿದ್ದರೆ ಮುಂಬರುವ ಕೇಂದ್ರದ ನೂತನ ಸರ್ಕಾರದ ಮೇಲೆ ಒತ್ತಡ ಹೇರಲು ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ೧೦೧ ಜಾತಿಗಳಿದ್ದು, ಅವುಗಳ ಏಳಿಗೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕಿತ್ತು. ಕೇವಲ ವೇದಿಕೆಗಳಲ್ಲಿ ಮಾತನಾಡಿದರೆ ಮಾತ್ರ ಸಾಲದು, ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ದಿನಕ್ಕೆ ೧೦೦ ನೀಡಲಾಗಿದೆ ಇದರಿಂದ ತಿಂಗಳಿಗೆ ಯಾವ ಗುಣಮಟ್ಟದ ಊಟ ನೀಡಲು ಸಾಧ್ಯ, ಅವರಿಗೆ ಇನ್ನುಳಿದ ಸೇವೆಗಳ ಗುಣಮಟ್ಟ ಯಾವರೀತಿಯದ್ದುಎಂದು ಪ್ರಶ್ನಿಸಿದ ಅವರು, ಎಸ್ಸಿ/ಎಸ್ಟಿ ಪಟ್ಟಿಯಲ್ಲಿರುವ ವಿವಿಧ ಜಾತಿಗಳ ನಿಗಮಗಳಿಗೆ ಜನ ಸಂಖ್ಯಾಧಾರಿತವಾಗಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಸಂವಿಧಾನ ಬದ್ದವಾಗಿ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡಬೇಕಾದ ಸರ್ಕಾರ ತಮ್ಮ ಭರವಸೆಗಳನ್ನು ಕೇವಲ ವೇದಿಕೆಗಳಿಗೆ ಸೀಮಿತಗೊಳಿಸುವುದನ್ನು ಬಿಡಬೇಕೆಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!