• Fri. May 3rd, 2024

PLACE YOUR AD HERE AT LOWEST PRICE

ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ  ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ.

ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿರುವ ಕುಮಾರಸ್ವಾಮಿ ಅವರು ಆರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೂರು ಕ್ಷೇತ್ರಗಳಿಗೆ ಸದ್ಯಕ್ಕೆ ಬಿಜೆಪಿ ಹೈಕಮಾಂಡ್‌ ಒಪ್ಪಿಗೆ ಸೂಚಿಸಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ತಾಲೀಮು ಆರಂಭಿಸಿವೆ. ಆದರೆ ಕ್ಷೇತ್ರ ಹಂಚಿಕೆ ವಿಚಾರವಾಗಿ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ, ಹಾಸನ ಮತ್ತು ಕೋಲಾರ ವಿಚಾರದಲ್ಲಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಗೃಹ ಸಚಿವರು ಮತ್ತು ಹೈಕಮಾಂಡ್, ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!