• Thu. Apr 25th, 2024

PLACE YOUR AD HERE AT LOWEST PRICE

ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ವರದಿ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಪ್ರಕಾಶ್ ಹೆಗ್ಡೆ, “ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ನಮ್ಮ ವರದಿಯ ಅಂಶಗಳನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ಸರ್ಕಾರದ ಕೆಲಸ” ಎಂದರು.

“2014-15ರಲ್ಲಿ ಕಾಂತರಾಜ್‌ ಸಮಿತಿ ದತ್ತಾಂಶ ಸಂಗ್ರಹ ಮಾಡಿದ್ದ ವರದಿಯನ್ನು ಸಿಎಂಗೆ ಸಲ್ಲಿಸಿದ್ದೇವೆ. ಸಿಎಂ ಮುಂದಿನ ಸಂಪುಟ ‌ಸಭೆಯಲ್ಲಿ ವರದಿಯನ್ನು ಇಡುವುದಾಗಿ ಹೇಳಿದ್ದಾರೆ. ನಾವು ವರದಿ ಸರ್ಕಾರಕ್ಕೆ ನೀಡಿದ್ದೇವೆ. ಮುಂದಿನ ಬೆಳವಣಿಗೆ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತೆ. ಸಂಪೂರ್ಣ ವರದಿ ಓದದೆ ಜಾತಿಗಣತಿ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ.

ಈ ವರದಿಯಲ್ಲಿ ಎಲ್ಲಾ ಸದಸ್ಯರ ಸಹಿ ಇದೆ. ಇದು ಕಾಂತರಾಜ್ ವರದಿಗೆ ಉತ್ತರ ನೀಡುವ‌ ವರದಿಯಾಗಿದೆ. ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದು ಜಾತಿ ಗಣತಿ ವರದಿಯಲ್ಲ. ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿ” ಎಂದು ಹೇಳಿದರು.

ಹಿಂದೆಯೇ ಸಲ್ಲಿಕೆಯಾಗಬೇಕಿತ್ತು.

ಈ ಹಿಂದೆಯೇ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆಯಾಗಬೇಕಿತ್ತು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಧ್ಯಕ್ಷ ಕೆ ಜಯಪ್ರಕಾಶ್‌ ಹೆಗ್ಡೆ ಮತ್ತು ಸದಸ್ಯರ ಅವಧಿ ಕಳೆದ ನವೆಂಬರ್‌ನಲ್ಲಿ ಮುಗಿದಿತ್ತು. ಪರಿಷ್ಕೃತ ಸಮಗ್ರ ವರದಿ ಅಂತಿಮಗೊಳಿಸಲು ಕಾಲಾವಕಾಶ ಅಗತ್ಯವಿದೆ ಎಂಬ ಕಾರಣಕ್ಕೆ ಸರಕಾರ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.

ವರದಿ ಅಂತಿಮಗೊಳಿಸುವ ಹಾಗೂ ಮುದ್ರಣಕ್ಕೆ ಕಾಲಾವಕಾಶದ ಕಾರಣಕ್ಕೆ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯನ್ನು 2ನೇ ಬಾರಿಗೆ ಫೆಬ್ರವರಿ 29ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ತಮ್ಮ ಅಧಿಕಾರಾವಧಿಯ ಕೊನೆಯ ದಿನ ಜಾತಿ ಗಣತಿ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಜಯಪ್ರಕಾಶ್‌ ಹೆಗ್ಡೆ ತಮ್ಮ ಜವಾಬ್ದಾರಿ ಪೂರೈಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಸಲ್ಲಿಸಿರುವ ವರದಿಯಲ್ಲಿ ಒಟ್ಟು 13 ಪ್ರತಿಗಳಿದ್ದು, ಅವುಗಳಲ್ಲಿ ಈ ಕೆಳಗಿನ ಪ್ರಮುಖ ಅಂಶಗಳಿವೆ.

  1. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಸಮಗ್ರ ರಾಜ್ಯ ವರದಿ
  2. ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
  3. ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತುಪಡಿಸಿ)
  4. ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು)
  5. ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)
  6. ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ-ಅಂಶಗಳು (ಎರಡು ಸಿಡಿಗಳು)
  7. ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 201 ರ ದತ್ತಾಂಶಗಳ ಅಧ್ಯಯನ ವರದಿ-2024

ವಿರೋಧದ ನಡುವೆಯೂ ಸಲ್ಲಿಕೆ

ಜಾತಿ ಜನಗಣತಿ ಸ್ವೀಕಾರ ಆಕ್ಷೇಪಿಸಿ ಲಿಂಗಾಯತ ಸ್ವಾಮೀಗಳು, ಒಕ್ಕಲಿಗ ಸ್ವಾಮೀಜಿಗಳು, ಮುಖಂಡರು ಮುಖ್ಯಮಂತ್ರಿಗೆ ಪತ್ರ ನೀಡಿದ್ದರು. ಉಪಮುಖ್ಯಮಂತ್ರಿ ಹಾಗೂ ಒಕ್ಕಲಿಗ ಸಮುದಾಯದ ಮುಖಂಡ ಡಿ.ಕೆ.ಶಿವಕುಮಾರ್ ಸಹಿ ಇತ್ತು. ಇದು ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿತ್ತು. ಹಾಗೆಯೇ ಕಾಂಗ್ರೆಸ್‌ ಲಿಂಗಾಯತ ನಾಯಕರೂ ಕೂಡ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ಇದಾದ ನಂತರ ಹಲವು ವೇದಿಕೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸ್ವೀಕಾರಕ್ಕೆ ಬದ್ಧ ಎಂದು ಹೇಳಿದ್ದರು. ಜತೆಗೆ ಈಚೆಗಷ್ಟೇ ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಕೂಡ, “ವರದಿ ಸ್ವೀಕರಿಸುವ ಬಗ್ಗೆ ಸರಕಾರಕ್ಕೆ ಬದ್ಧತೆ ಇದೆ. ಸ್ವೀಕರಿಸಿಯೇ ತೀರುತ್ತೇವೆ. ಪಲಾಯನದ ಪ್ರಶ್ನೆ ಇಲ್ಲ. ಫೆ. 29ರವರೆಗೆ ಕಾಯಿರಿ’ ಎಂದು ಸುಳಿವು ನೀಡಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!