• Sun. Apr 28th, 2024

PLACE YOUR AD HERE AT LOWEST PRICE

ಕಾಂಗ್ರೆಸ್‌ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಅವರು, “50 ರೂಪಾಯಿ ಪರೀಕ್ಷಾ ಶುಲ್ಕ ವಸೂಲಿ ಮಾಡಿದ ನಂತರವೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆಗಳನ್ನ ಸರಬರಾಜು ಮಾಡಲಾಗದ ಈ ದರಿದ್ರ ಸರ್ಕಾರ ಈಗ 5, 8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಪದೇ ಪದೇ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಿರುವ ನಿಮ್ಮ ನಾಲಾಯಕ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾ ಮಾಡಿ. ನಿಮ್ಮ ಪಕ್ಷದಲ್ಲಿ ಶಿಕ್ಷಣ ಖಾತೆಯನ್ನು ನಿಭಾಯಿಸುವ ಸಮರ್ಥ ಶಾಸಕರು ಯಾರೂ ಇಲ್ಲವಾದರೆ ನೀವೂ ರಾಜೀನಾಮೆ ಕೊಟ್ಟು ತೊಲಗಿ” ಎಂದಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!