• Mon. Apr 29th, 2024

PLACE YOUR AD HERE AT LOWEST PRICE

ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಈ ಬಾರಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಸರಳವಾಗಿ ಇದೇ ತಿಂಗಳ 25 ರ ಸೋಮವಾರ ದಂದು ಆಚರಿಸಲಾಗುವುದೆಂದು ಬಲಿಜ ಸಮುದಾಯದ ಮುಖಂಡ ಹಾಗೂ ಯೋಗಿ ನಾರಾಯಣ ಬಲಿಜ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಪ್ರಸಾದ್ ತಿಳಿಸಿದರು‌.
ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಾ  ಜಿಲ್ಲಾ ಆಡಳಿತ ಸರಳವಾಗಿ ಆಚರಿಸಲು ಅನುಮತಿ ನೀಡಿರುವುದರಿಂದ ಯಾವುದೇ  ಮೆರವಣಿಗೆ ವೇದಿಕೆ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಣೆ ಮಾಡದೆ ಸರಳವಾಗಿ ಹಾಗೂ ಸಾಂಕೇತಿಕವಾಗಿ  ನಡೆಸಲು ತೀರ್ಮಾನಿಸಲಾಗಿದೆಯೆಂದು ಹೇಳಿದರು.
25 ರ‌ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೇಕಲ್ ರಸ್ತೆಯಲ್ಲಿರುವ  ಯೋಗಿನಾರೇಯಣ ಯತೀಂದ್ರರ ಪುತ್ಥಳಿಗೆ ಪೂಜೆ ಸಲ್ಲಿಸಿ ತದ ನಂತರ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಡಳಿತ ಸಾಂಕೇತಿಕವಾಗಿ ನಡೆಸುವ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಸಮುದಾಯದ ಎಲ್ಲಾ ಜನತೆ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಸಮುದಾಯದ ಮುಖಂಡ ಹಾಗೂ ನಿವೃತ್ತ ಪೋಲಿಸ್ ಅಧಿಕಾರಿ ವೆಂಕಟಸ್ವಾಮಿ ಮಾತನಾಡಿ ಸರಳವಾಗಿ ಹಾಗೂ ಭಕ್ತಿ ಪೂರಕವಾಗಿ ನಡೆಯಲಿರುವ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯಲ್ಲಿ ಸಮುದಾಯದ ಎಲ್ಲಾ ಕುಲಭಾಂದವರು ಹಾಗೂ ಎಲ್ಲಾ ವರ್ಗದ ಜನತೆ ಭಾಗವಹಿಸಿ ಯಶಸ್ಸು ಗೊಳಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸದಸ್ಯ
ರಘ ಉರ್ಫ್ ಚಿಟ್ಟಿ,ಸಮುದಾಯದ ಮುಖಂಡರುಗಳಾದ ರಂಗನಾಥ್, ಎಸ್.ಎಸ್.ಶ್ರೀಧರ್,ರಾಜೇಶ್, ಮಹೇಶ್, ಎಂ.ಜಿ.ಮಂಜುನಾಥ್, ಗೋವರ್ಧನ್ ಮುಂತಾದವರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!