• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ:ಇಂದು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷ ಟಿಕೆಟ್ ಘೋಷಣೆ ಮಾಡುವ ಸಾದ್ಯತೆ ಇದ್ದು ಸಚಿವ ಕೆ.ಹೆಚ್.ಮುನಿಯಪ್ಪ ಅಳಿಯನಿಗೆ ಟಿಕೆಟ್ ಸಿಗುವ ಸಭವ ಇದೆ. ಇದಕ್ಕೆ ಅಸಮದಾನಗೊಂಡಿರುವ ಜಿಲ್ಲೆಯ 3 ಶಾಸಕರು ಮತ್ತು ಇಬ್ಬರು ವಿಧಾನಪರಿಷತ್ ಸಧಸ್ಯರು ರಾಜಿನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಕೆ.ಹೆಚ್.ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆ ನೀಡಬಾರದು ಎಂದು ಜಿಲ್ಲೆಯ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸಚಿವ ಡಾ.ಎಂ.ಸಿ ಸುಧಾಕರ್, ವಿಧಾನಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಮತ್ತು ನಜೀರ್ ಅಹಮದ್ ರಾಜಿನಾಮೆಗೆ ಮುಂದಾಗಿದ್ದಾರೆಂದು ತಿಳಿದುಬಂದಿದೆ. ಜೊತೆಗೆ ಮಾಲೂರು ಶಾಸಕ ಕೆ.ವೈ ನಂಜೇಗೌಡ ಸಹ ರಾಜಿನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಕೋಲಾರ ಕೈ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ ಬಣಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದ್ದು, ಕೆ.ಹೆಚ್ ಅಳಿಯನಿಗೆ ಟಿಕೆಟ್ ನೀಡುವ ಸೂಚನೆ ಇದ್ದು ವಿಷಯ ತಿಳಿಯುತ್ತಿದ್ದಂತೆ ರಮೇಶ್ ಕುಮಾರ್ ಬಣದ 5 ಶಾಸಕರು ರಾಜಿನಾಮೆ ನೀಡಲು ಮುಂದಾಗಿದ್ದಾರೆ.

ಇಂದು ಮಧ್ಯಾನ್ಹ ಮಂಗಳೂರಿಗೆ ತೆರಳಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಕಾಂಗ್ರೇಸ್ ಶಾಸಕರು ರಾಜಿನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸುದ್ದಿಗೋಷ್ಠಿ ನಡೆಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಧಸ್ಯರಾದ ಕೊಲಾರದ ಅನಿಲ್ ಕುಮಾರ್ ಮತ್ತು ನಜೀರ್ ಅಹಮದ್ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಎಡಗೈ ಸಮಾಜಕ್ಕೆ ಟಿಕೆಟ್ ನೀಡುವಂತೆ ಕೆ.ಹೆಚ್.ಮುನಿಯಪ್ಪ ಆರಂಭದಿಂದಲೂ ಪಟ್ಟು ಹಿಡಿದಿದ್ದಾರೆ. ಅದರಲ್ಲೂ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡಬೇಕು ಎಂದು ಹೈ ಕಮಾಂಡ್ ಮೇಲೆ ಪ್ರಭಲವಾದ ಒತ್ತಡ ಹಾಕುತ್ತಿದ್ದಾರೆ. ಚಿಕ್ಕಪೆದ್ದಣ್ಣ ಕೆ.ಆರ್.ಪುರಂ ನ ಉಪನೊಂದಣಾಧಿಕಾರಿ ಕಛೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟುದ್ದು ಅದು ಅಂಗೀಕಾರವಾಗಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಕೋಲಾರ ಕ್ಷೇತ್ರಕ್ಕೆ ಬಲಗೈ ಸಮುದಾಯಕ್ಕೇ ಟಿಕೆಟ್ ನೀಡಬೇಕು ಎಂದು ಹೈ ಕಮಾಂಡ್ ಮೇಲೆ ಆರಂಭದಿಂದಲೂ ಒತ್ತಡ ಹೇರುತ್ತಿದೆ. ಬಲಗೈ ಸಮುದಾಯದ ಮುಖಂಡರಾದ ಸಿ.ಎಂ.ಮುನಿಯಪ್ಪ ಮತ್ತು ಶಶಿಧರ್ ರಾಜಣ್ಣ ರಮೇಶ್ ಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕೋಲಾರ ಟಿಕೆಟ್ ನೀಡುವ ವಿಷಯದಲ್ಲಿ ಹೈಕಮಾಂಡ್ ಲೆಕ್ಕಾಚಾರವೇ ಬೇರೆ ಇದೆ. ರಾಜ್ಯದಲ್ಲಿರು 5 ಎಸ್.ಸಿ ಮೀಸಲು ಕ್ಷೇತ್ರಗಳಲ್ಲಿ ಈಗಾಗಲೆ 3 ಕ್ಷೇತ್ರಗಳಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ. ಚಿತ್ರದುರ್ಗ ಟಿಕೆಟ್ ಎಡಗೈ ಸಮುದಾಯಕ್ಕೆ ನೀಡಲಾಗಿದೆ. ಉಳಿದ ಕೋಲಾರ ಟಿಕೆಟ್ ಬಲಗೈ ಸಮುದಾಯಕ್ಕೆ ನೀಡಿದರೆ ಎಡಗೈ ಸಮುದಾಯ ಪಕ್ಷದ ಮೇಲೆ ಅಸಮದಾನಗೊಳ್ಳಬಹುದು ಎಂಬ ಅಂಶವನ್ನು ಗಣನೆಗೆ ತೆಗೆದುಕೊಳ್ಳುವ ಸೂಚನೆಗಳಿವೆ.

ಎಡಗೈ ಸಮುದಾಯಕ್ಕೇ ನೀಡುವುದಾದರೆ ಎಲ್.ಹನುಮಂತಯ್ಯರಿಗೆ ಟಿಕೆಟ್ ನೀಡಿದರೆ ಕೆಲಸ ಮಾಡುತ್ತೇವೆ ಎಂದು ರಮೇಶ್ ಕುಮಾರ್ ಬಣ ಹೈ ಕಮಾಂಡ್ ಗಮನಕ್ಕೆ ತಂದಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಗಳ ನಡುವೆ ಹೈ ಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!