• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಎಡಗೈ ಬಲಗೈಯಲ್ಲಿ ಯಾವ ಸಮುದಾಯದಲ್ಲಿ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂಬ ಗೊಂದಲ ತಾರಕಕ್ಕೇರಿದೆ. ಸಚಿವ ಕೆ.ಹೆಚ್.ಮುನಿಯಪ್ಪ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡೊದ್ದಾರೆ ಎನ್ನಲಾಗಿದೆ.

ಮತ್ತೊಂದು ಕಡೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಬಲಗೈ ಸಮುದಾಯದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವ ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಲು ಮುಂದಾಗಿರುವ ಕಾಂಗ್ರೇಸ್ ಹೈ ಕಮಾಂಡ್ ಎಡಗೈ ಅಭ್ಯರ್ಥಿ ಆಯ್ಕೆಗೆ ಮುಂದಾಗಿದೆ ಎನ್ನಲಾಗಿದ್ದು, ಎಡಗೈ ಸಮುದಾಯದ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಎರಡೂ ಬಣಗಳು ಸೂಚಿಸುವ ಅಭ್ಯರ್ಥಿಗಳನ್ನು ಬಿಟ್ಟು ಬೇರೆಯವರನ್ನು ಆಯ್ಕೆ ಮಾಡಲು ಹೈ ಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಅದರಂತೆ ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ ಯುವ ಕಾಂಗ್ರೇಸ್ ನಾಯಕರಾಗಿದ್ದ ಗೌತಮ್ ರನ್ನು ಬಹುತೇಕ ಆಯ್ಕೆ ಮಾಡಬಹುದು ಎಂದು ತಿಳಿದುಬಂದಿದೆ.

ಜೊತೆಗೆ ಎಡಗೈ ಸಮುದಾಯದ ಇನ್ನಷ್ಟು ಮುಂಖಡರು ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗುತ್ತಿದ್ದು ಅದರಲ್ಲಿ ಪ್ರಮುಖವಾಗಿ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಮತ್ತು ಬೆಂಗಳೂರಿನ ಸಮಾಜ ಸೇವಕ ನಾರಾಯಣಸ್ವಾಮಿ ಪ್ರಮುಖರಾಗಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದರ ಬಗ್ಗೆ ಎರಡು ಬಣಗಳ ನಡುವ ಸಂಘರ್ಷ ತಾರಕಕ್ಕೇರಿದ್ದು ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ರಾಜಿನಾಮೆ ನೀಡಲು ಮುಂದಾದ ಹಂತಕ್ಕೆ ತಲುಪಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!