PLACE YOUR AD HERE AT LOWEST PRICE
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ವಾಪಸ್ ಪಡೆದಿದ್ದರು.
ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣೆಯ ಜೊತೆಗೆ 60 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ. ಈ ರಾಜ್ಯದ ಲೋಕಸಭಾ ಫಲಿತಾಂಶವು ಜೂನ್ 4ರಂದು ನಡೆದರೆ , ವಿಧಾನಸಭಾ ಚುನಾವಣೆಯ ಫಲಿತಾಂಶ ಜೂ.02 ರಂದು ನಡೆಯಲಿದೆ.
ಮುಖ್ಯಮಂತ್ರಿ ಪೆಮಾ ಖಂಡು ಮುಕ್ತೊ ವಿಧಾನಸಭಾ ಕ್ಷೇತ್ರದಿಂದ ಹಾಗೂ ಡಿಸಿಎಂ ಚೌನಾ ಮೈನ್ ಅವರು ಚೌಕಾಮ್ ವಿಧಾನಸಭಾ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯ 60 ಸ್ಥಾನಗಳಲ್ಲಿ ಬಹುಮತ ಗಳಿಸಲು 31 ಸ್ಥಾನ ಗಳಿಸಬೇಕಾಗಿದೆ.