• Mon. Apr 29th, 2024

PLACE YOUR AD HERE AT LOWEST PRICE

ಕೋಲಾರವನ್ನು ಬೆಂಗಳೂರು ಮಾಡುವ ಕನಸಿನೊಂದಿಗೆ ನಿಮ್ಮ ಆಶೀರ್ವಾದಕ್ಕಾಗಿ ಬಂದಿರುವೆ, ಕಾಂಗ್ರೆಸ್‌ಗೆ ಮತ ಹಾಕಿ, ನಾನು ನಿಮ್ಮ ದ್ವನಿಯಾಗುತ್ತೇನೆ – ಕೆ.ವಿ.ಗೌತಮ್

ಕೋಲಾರ, ಏಪ್ರಿಲ್. ೦೨ : ಕಳೆದ ೩೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟೆಯಿಂದ ಸೇವೆ ಮಾಡಿದ್ದನ್ನು ಗುರುತಿಸಿ ಪಕ್ಷ ನನ್ನನ್ನು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಳಿಸಿದೆ, ತಾವು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿ ನನ್ನನ್ನು ಆಯ್ಕೆ ಮಾಡಿದರೆ, ನಾನು ಕೋಲಾರದ ಜನತೆ ಧ್ವನಿಯಾಗುತ್ತೇನೆ ಎಂದು ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಮತಯಾಚಿಸಿದರು.

ನಗರದ ಹೊರವಲಯದಲ್ಲಿರುವ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಕೋಲಾರ ವಿಧಾನ ಸಭಾ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕೋಲಾರ ಜಿಲ್ಲೆ ರಾಜದಾನಿ ಬೆಂಗಳೂರಿಗೆ ಅತಿ ಸಮೀಪವಿದ್ದರೂ ಅಭಿವೃದ್ದಿ ಮರೀಚಿಕೆಯಾಗಿದೆ, ನಾನು ಒಬ್ಬ ಸಿವಿಲ್ ಇಂಜಿನಿಯರ್ ಆಗಿ ಪಕ್ಷದಲ್ಲಿ ಕಳೆದ ೩೦ ವರ್ಷಗಳ ಸುಧೀರ್ಘ ಸೇವೆ ಮಾಡಿರುವ ಅನುಭವದಲ್ಲಿ ಕೋಲಾರವನು ಬೆಂಗಳೂರಿನ ಅವಳಿ ನಗರವಾಗಿ ಅಭಿವೃದ್ದಿಗೊಳಿಸುವ ಮಹದಾಸೆಯೊಂದಿಗೆ ನಿಮ್ಮ ಬಳಿ ಬಂದಿದ್ದೇನೆ. ಕ್ಷೇತ್ರದ ಸಮಸ್ತ ಮತ ಬಾಂಧವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಆ ಮತ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ. ಡಿ.ಕೆ.ಶಿವಕುಮಾರ್, ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕೈ ಬಲಪಡಿಸಲಿದೆ. ಇದರಿಂದ ಕ್ಷೇತ್ರ ಅಭಿವೃದ್ದಿಗೆ ಸಹಕಾರಿಯಾಗುವುದು ಎಂದು ತಿಳಿಸಿದರು.

ಕಳೆದ ೧೦ ವರ್ಷಗಳಲ್ಲಿ ಬಿಜೆಪಿಯ ಜನವಿರೋಧಿ ನೀತಿಗಳಿಂದ ಜನ ಬೇಸತ್ತಿದ್ದಾರೆ, ನಿರುದ್ಯೋಗ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಅಭಿವೃದ್ದಿಗೆ ಬದಲು ಕೋಮುದ್ವೇಶದ ರಾಜಕೀಯವನ್ನಷ್ಟೇ ಬಿಜೆಪಿ ಮಾಡಿದೆ. ಜಿಲ್ಲೆಯಲ್ಲಿ ಗುಂಪುಗಾರಿಕೆ ಅನ್ನುವುದು ಏನೂ ಇಲ್ಲ, ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ರೀತಿಯಲ್ಲಿ ಜನ ಬೆಂಬಲ ವ್ಯಕ್ತವಾಗಿದೆ. ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರೂ ಅವರ ಕಾರ್ಯಕರ್ತರಲ್ಲಿ ಗೊಂದಲವಿದೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ, ಗ್ಯಾರಂಟಿ ಕಾರ್ಯಕ್ರಮಗಳು ನಮ್ಮ ಶ್ರೀರಕ್ಷೆಯಾಗಿದೆ. ಮುಂದಿನ ದಿನಗಳಲ್ಲಿ ದೇಶದ ಹಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಬೇಕೆAದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾತನಾಡಿ, ಕೋಲಾ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಇದ್ದಿದ್ದು ನಿಜಾ, ಇಂದು ಎರಡೂ ಗುಂಪಿನ ಮುಖಂಡರು ಚುನಾವಣೆಯನ್ನು ಒಗ್ಗಟ್ಟಿನಿಂದ ನಡೆಸಿಕೊಡಲಿದ್ದಾರೆ. ಮುಂದಿನ ದಿನಗಳಲ್ಲಿ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಪ್ರಚಾರದಲ್ಲಿ ಸ್ಟಾರ್ ಕ್ಯಾಂಪೇನ್‌ರಾಗಿ ಭಾಗವಹಿಸುತ್ತಾರೆ, ಪಕ್ಷದಲ್ಲಿ ಭಿನ್ನಮತ ಸಂಪೂರ್ಣವಾಗಿ ಶಮನವಾಗಿದೆ. ಯಾವುದೇ ಗೊಂದಲಗಳಿಲ್ಲ, ಬಣ ರಾಜಕೀಯ ಎಲ್ಲವೂ ಇತ್ಯರ್ಥವಾಗಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಚಿವ ನಿಸ್ಸಾರ್ ಅಹಮದ್, ಶಾಸಕರಾದ, ಕೆ.ವೈ.ನಂಜೇಗೌಡ, ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಿö್ಮನಾರಾಯಣ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ.ಘಟಕದ ಅಧ್ಯಕ್ಷ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ಮುಂತದವರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!