• Fri. Oct 11th, 2024

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

PLACE YOUR AD HERE AT LOWEST PRICE

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

ಕಳೆದ ಒಂದು ತಿಂಗಳಿನಿoದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ನರಸಾಪುರ ಕೈಗಾರಿಕಾ ಪ್ರಾಂಗಣದ ಎಕ್ಸಿಡಿ ಕ್ಲಚ್ ಇಂಡಿಯ ಪ್ರೆöÊ ಲಿನ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಹಲವಾರು ಕೈಗಾರಿಕಾ ಕಾರ್ಮಿಕರ ಸಂಘಟನೆಗಳು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದವು. ಜೊತೆಗೆ ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿದ್ದಲ್ಲಿ ತೀವ್ರ ರೀತಿಯ ಹೋರಾಟಗಳನ್ನು ನಡೆಸಲು ಎಲ್ಲಾ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ.

ನರಸಾಪುರ ಕೈಗಾರಿಕಾ ಪ್ರಾಂಗಣದ ಎಕ್ಸಿಡಿ ಕ್ಲಚ್ ಇಂಡಿಯ ಪ್ರೆöÊ ಲಿನ ಕಾರ್ಮಿಕರು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ ೨೬ರಿಂದ ಕೆಲಸವನ್ನು ತ್ಯಜಿಸಿ ಕೈಗಾರಿಕೆಯ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ಮತ್ತು ಏಪ್ರಿಲ್ ೧೭ ರಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಇಲ್ಲಿಯ ತನಕ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದೇ ಆಡಳಿತ ಮಂಡಳಿ ನಿರ್ಲಕ್ಷö್ಯ ವಹಿಸಿದ್ದಾರೆ. ಈ ಕುರಿತು ಜಿಲ್ಲಾಡಳಿತವು ಆಡಳಿತ ಮಂಡಳಿ ಮತ್ತು ಕಾರ್ಮಿಕರನ್ನು ಕರೆಸಿ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿದರು.

ವೊಲ್ವೊ ಟ್ರಕ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜುರವರು ಮಾತನಾಡಿ ಎಕ್ಸಿಡಿ ಆಡಳಿತ ಮಂಡಳಿಗೆ ರಾಜ್ಯದಲ್ಲಿನ ಕಾರ್ಮಿಕ ಕಾನೂನುಗಳ ತಿಳುವಳಿಕೆ ಜೊತೆಗೆ ಸಾಮಾನ್ಯ ತಿಳುವಳಿಕೆ ಇಲ್ಲ. ಕಾರ್ಮಿಕ ಸಂಘವು ಸಲ್ಲಿಸಿದ್ದ ಬೇಡಿಕೆಗಳ ಪಟ್ಟಿಯ ಕುರಿತು ಆಡಳಿತ ಮಂಡಳಿಯೇ ಸಲ್ಲಿಸಿದ್ದ ಅಭಿಪ್ರಾಯವನ್ನು ಮಕ್ಕಳಾಟ ರೀತಿಯಲ್ಲಿ ದಿನ, ಗಂಟೆ, ಗಳಿಗೆಗೊಮ್ಮೆ ಬದಲಾಯಿಸುತ್ತಿದೆ. ಕಾರ್ಮಿಕರಿಗೆ ಹಲವಾರು ರೀತಿಯಲ್ಲಿ ಕಿರುಕುಳ, ಬೆದರಿಕೆ, ತೊಂದರೆಗಳನ್ನು ನೀಡುತ್ತಿದ್ದು, ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಆಡಳಿತ ಮಂಡಳಿಯು ವರ್ತಿಸುತ್ತಿದೆ ಎಂದು ದೂರಿದರು.

ಹೊಂಡಾ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶಶಿಕುಮಾರ್ ರವರು ಮಾತನಾಡಿ ಎಕ್ಸಿಡಿ ಆಡಳಿತ ಮಂಡಳಿಯು ಕಾರ್ಮಿಕರ ಸಂಘದೊAದಿಗೆ ವೇತನ ಒಪ್ಪಂದ ಮಾಡಿಕೊಳ್ಳುವಾಗ ಪ್ರತಿ ಬಾರಿ ಹಲವು ರೀತಿಯಲ್ಲಿ ತೊಂದರೆ, ಕಿರುಕುಳಗಳನ್ನು ನೀಡುವುದು ಎಕ್ಸಿಡಿ ಆಡಳಿತ ಮಂಡಳಿಗೆ ಅಭ್ಯಾಸವಾಗಿದೆ. ತಕ್ಷಣ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲದಿದ್ದಲ್ಲಿ ನರಸಾಪುರ ಸುತ್ತಮುತ್ತಲಿನ ಎಲ್ಲಾ ಕಾರ್ಮಿಕರ ಜಂಟಿಯಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ ಮಾತನಾಡಿ ನರಸಾಪುರ, ವೇಮಗಲ್ ಮತ್ತು ಮಾಲೂರು ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ಕಾರ್ಮಿಕ ಸಂಘಗಳು ಒಂದು ವೇದಿಕೆಯಡಿ ಬಂದಿರುವುದು ಸ್ವಾಗತಾರ್ಹ, ಈ ಪ್ರದೇಶದಲ್ಲಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಜೊತೆಗೆ ಎಕ್ಸಿಡಿ ಕಾರ್ಮಿಕರ ಸಮಸ್ಯೆಯನ್ನು ತಕ್ಷಣ ಈಡೇರಿಸದಿದ್ದಲ್ಲಿ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವೊಲ್ಟೋ ಬಸ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಬಾಂಡೋ ಕಾರ್ಮಿಕ ಸಂಘದ ಅಧ್ಯಕ್ಷರಾದ ಶಶಿಕುಮಾರ್, ಐಸಿನ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪೌಲರ್ ವೆಸ್ಟಾçಪ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ್, ಮೆಡ್ರೀಚ್ ೭ ಕಾರ್ಮಿಕ ಸಂಘದ ಮುಖಂಡರಾದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮೆಡ್ರೀಚ್ ೮ ಕಾರ್ಮಿಕ ಸಂಘದ ಮುಖಂಡರಾದ ಪ್ರಧಾನ ಕಾರ್ಯದರ್ಶಿ ಮುರಳಿ, ಐಟಿಸಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಕಾರ್ಯದರ್ಶಿ ಎಂ.ಭೀಮರಾಜ್, ಡಿವೈಎಫ್‌ಐ ತಾಲ್ಲೂಕು ಮುಖಂಡರಾದ ಮುಸ್ತಾಪ, ಎಕ್ಸಿಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಹರೀಶ್, ಖಜಾಂಚಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Related Post

ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ
ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ

Leave a Reply

Your email address will not be published. Required fields are marked *

You missed

error: Content is protected !!