• Sun. Sep 8th, 2024

PLACE YOUR AD HERE AT LOWEST PRICE

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಯಲ್ಲಿ ದೂರು ದಾಕಲಾಗಿತ್ತು ಎನ್ನಲಾಗಿದ್ದು, ಇಲಾಖೆಯ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ ಎನ್‌ ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು ಶುಕ್ರವಾರ ಡಿ.ಎಸ್.ವೀರಯ್ಯರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

2021ರಿಂದ 2023ರ ನಡುವೆ ಡಿ ಎಸ್ ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ 55 ಕೋಟಿ ರೂಪಾಯಿ ಅಕ್ರಮ ಎಸಗಿರುವ ಆರೋಪ ಡಿ ಎಸ್ ವೀರಯ್ಯ ಮೇಲೆ ಕೇಳಿ ಬಂದಿದೆ.

ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಲಾಗಿತ್ತು. ಆ ಸಂಬಂಧ 2023 ಸೆಪ್ಟೆಂಬರ್​ 23ರಂದು ಭಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಬಳಿಕ ವೀರಯ್ಯ ಅವರು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯನ್ನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

 

Leave a Reply

Your email address will not be published. Required fields are marked *

You missed

error: Content is protected !!