• Sun. Sep 8th, 2024

PLACE YOUR AD HERE AT LOWEST PRICE

ಕೋಲಾರ,ಜುಲೈ.೨೨ : ವಾಲ್ಮೀಕಿ ನಿಗಮದ ಹಗರಣ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. 

ಗುರುಪೂರ್ಣಿಮೆ ಪ್ರಯುಕ್ತ ಭಾನುವಾರ ನಗರದ ಸಾಯಿಬಾಬಾ ದೇವಾಲಯಕ್ಕೆ ಬೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಬoಧಿಸಿದoತೆ ರೂ.೮೭ ಕೋಟಿ ಹಗರಣದಲ್ಲಿ ರೂ.೪೦ ಕೋಟಿ ಜಮಾ ಆಗಿದೆ. ಎಲ್ಲವನ್ನೂ ವಾಪಸ್ ಪಡೆಯಲು ಸರ್ಕಾರ ಕ್ರಮಕೈಗೊಂಡಿದ್ದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ಪ್ರಕರಣ ತನಿಖಾ ಹಂತದಲ್ಲಿದ್ದು ತನಿಖೆ ಪೂರ್ಣವಾಗುವ ತನಕ ಮಾತನಾಡುವುದು ತಪ್ಪು ಎಂದರು.

ನಮ್ಮ ಮುಂದೆ ಹತ್ತಾರು ಸಮಸ್ಯೆಗಳಿದ್ದು, ಅದನ್ನು ಬಗೆಹರಿಸಲು ಕಲಾಪವನ್ನು ಬಳಸಿಕೊಳ್ಳಬೇಕು. ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು. ಅನಗತ್ಯವಾಗಿ ಬೇರೆ ಬೇರೆ ವಿಷಯಗಳನ್ನು ಚರ್ಚೆ ಮಾಡುವುದು ಸರಿಯಲ್ಲ ಎಂದ ಅವರು, ಶಾಲೆಗಳಿಗೆ ಕಳಪೆ ಅಕ್ಕಿ ಪೂರೈಸಲಾಗುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾಸ್ಟಲ್ ಮತ್ತು ಶಾಲೆಗಳಿಗೆ ಗುಣಮಟ್ಟದ ಅಕ್ಕಿಯನ್ನು ನೀಡುವ ಬಗ್ಗೆ ಸಚಿವರೊಂದಿಗೆ ಹಾಗೂ ಸದನದಲ್ಲಿಯೂ ಚರ್ಚಿಸಲಾಗಿದೆ. ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಅಕ್ಕಿಯನ್ನು ನೀಡಿಲ್ಲ ಎಂದು ಹೇಳಿದರು.


ಸಿ.ಎಂ. ವಿರುದ್ಧ ವಿಪಕ್ಕಗಳ ಪಿತೂರಿ:
ಮುಖ್ಯಮಂತ್ರಿ ಸಿದ್ಧರಾಮಯ್ಯ ಮೇಲೆ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪವು ರಾಜಕೀಯ ಪಿತೂರಿಯಾಗಿದೆ. ಅವರು ಅಂಥ ಯಾವುದೇ ಕೆಲಸ ಮಾಡಿಲ್ಲ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅವರ ಪಾತ್ರವೇನೂ ಇಲ್ಲ ವಿನಾಕಾರಣ ಆರೋಪ ಮಾಡಲಾಗುತ್ತಿದ್ದು, ತನಿಖೆಯ ನಂತರ ಸತ್ಯ ಹೊರಬರಲಿದೆ ಎಂದು ಸಿ.ಎಂ.ಸಿದ್ಧರಾಮಯ್ಯರವರನ್ನು ಸಮರ್ಥಿಸಿಕೊಂಡರು.
ಸಂಸತ್ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಅಭ್ಯರ್ಥಿ ಸೋಲಿಗೆ ಸಂಬoಧಿಸಿದoತೆ ಹೈಕಮಾಂಡ್‌ಗೆ ತಮ್ಮ ವಿರುದ್ಧ ದೂರು ನೀಡಿರುವ ಬಗ್ಗೆ ಪ್ರಶ್ನೆಗೆ ಯಾರು ದುಡ್ಡು ನೀಡಿದ್ದಾರೋ ಅವರನ್ನೇ ಕೇಳಿ ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಉತ್ತರಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್‌ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ. ಎಸ್ಟಿ. ಘಟಕದ ಅಧ್ಯಕ್ಷ ನಾಗರಾಜ್, ಓಬಿಸಿ ಮಂಜುನಾಥ್ ಇದ್ದರು.

 

 

Leave a Reply

Your email address will not be published. Required fields are marked *

You missed

error: Content is protected !!