• Thu. Sep 19th, 2024

PLACE YOUR AD HERE AT LOWEST PRICE

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯದಲ್ಲಿ 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿರುವುದು ಪತ್ತೆಯಾಗಿದೆ. “ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆಯನ್ನು ಸಾವಂತವಾಡಿ (ರಾಜ್ಯದ ಕೊಂಕಣ ಪ್ರದೇಶದಲ್ಲಿ) ಮತ್ತು ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ; ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಎಂಬುದಕ್ಕೆ ನಾವು ಆಕೆಯ ಬಳಿ ಇದ್ದ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳಿಂದ ಕಂಡುಕೊಂಡಿದ್ದೇವೆ” ಎಂದು ಹೇಳಿದರು.

“ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ನಕಲು ಪ್ರತಿಯನ್ನು ಕಂಡುಕೊಂಡಿದ್ದೇವೆ. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದೆ. ಆಕೆಯ ವೀಸಾ ಅವಧಿ ಮುಗಿದಿದೆ. ಆಕೆಯ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಲು ನಾವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಪೊಲೀಸರು ವಿದೇಶಿಯರ ಪ್ರಾದೇಶಿಕ ನೋಂದಣಿ ಕಛೇರಿಯೊಂದಿಗೆ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.

ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ; ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮಹಿಳೆ ದುರ್ಬಲಳಾಗಿದ್ದಾಳೆ ಹಾಗೂ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಎಷ್ಟು ದಿನ ಆಕೆಯನ್ನು ಕಟ್ಟಿಹಾಕಲಾಕಿತ್ತೋ ಗೊತ್ತಿಲ್ಲ. ಆಕೆಯ ಪತಿ ತಮಿಳುನಾಡಿನಿಂದ ಬಂದಿದ್ದು, ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿರಬಹುದು” ಎಂದು ಪೊಲೀಸರು ಹೇಳಿದ್ದಾರೆ.

ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!