ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…
ಬಾಂಗ್ಲಾದೇಶ|ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ:105 ಮಂದಿ ಸಾವು, ಕರ್ಫ್ಯೂ ಘೋಷಣೆ
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಬಾಂಗ್ಲಾದೇಶದ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ…
ಶಾಲಾ ಮಕ್ಕಳಳಿಗೆ ವಾರದ 6ದಿನ ಮೊಟ್ಟೆ, ಅಜೀಂ ಪ್ರೇಮ್ ಜಿ ಪೌಂಡೇಷನ್ ನಿಂದ ನರವು:ಸಿಎಂ ಸಿದ್ದು ಉದ್ಘಾಟನೆ.
“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ…
ಕನ್ನಡಿಗರಿಗೆ ಉದ್ಯೋಗ, ಕಾರ್ಪೊರೇಟ್ ಕಮಪನಿಗಳಿಗೆ ಮಣಿದ ಸರ್ಕಾರ:ಕರವೇ ನಾರಾಯಣಗೌಡ ಆರೋಪ.
“ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ…
ರೈತನಿಗೆ ಅವಮಾನ:ಏಳು ದಿನಗಳ ಕಾಲ GT ಮಾಲ್ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ.
ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನಿಸಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು (ಜುಲೈ 18) ಸದನದಲ್ಲಿ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ…
ರಾಜ್ಯದಲ್ಲಿ ಬ್ರಷ್ಟ ಸರ್ಕಾರದ ನೇತೃತ್ವ ವಹಿಸಿರುವ ಸಿಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು:ಕೆ.ಚಂದ್ರಾರೆಡ್ಡಿ ಒತ್ತಾಯ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರೂಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಈ ಕೂಡಲೆ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಒತ್ತಾಯಿಸಿದರು. ಬಿಜೆಪಿ ಪಕ್ಷದ ರಾಜಾದ್ಯಕ್ಷ…
ಆಂಧ್ರಪ್ರದೇಶ:ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯನನ್ನು ಬುಧವಾರ ರಾತ್ರಿ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಿಸುಮಾರು ರಾತ್ರಿ 8:30ಕ್ಕೆ, ಜನ ದಟ್ಟಣೆಯ…
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ 50-75% ಉದ್ಯೋಗ ಮೀಸಲಾತಿ:ಮಸೂದೆಗೆ ಸಂಪುಟ ಅನುಮೋದನೆ.
ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ…
ಕೋಲಾರ ಕ್ಷೇತ್ರದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ:MP ಮಲ್ಲೇಶ್ ಬಾಬು.
ಬಂಗಾರಪೇಟೆ: ಸಂಸದನಾಗಿ ಆಯ್ಕೆಯಾಗಲು ಬಂಗಾರಪೇಟೆ ಕ್ಷೇತ್ರದ ಜನತೆಯ ಆಶೀರ್ವಾದ ಮುಖ್ಯ ಪಾತ್ರ ವಹಿಸಿದೆ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿರುವ ಅಭಿವೃದ್ದಿ ಯೋಜನೆಗಳ ಕುರಿತು ಈಗಾಗಲೇ ಸಂಬಂದಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಲಾಗಿದೆ ಹಂತ ಹಂತವಾಗಿ ಅಭಿವೃದ್ದಿಗೆ ಆದ್ಯತೆ ನೀಡುವ…
ಮುಂಗಾರು ಮಳೆ ಆರ್ಭಟ ಜೋರು:14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆಎಸ್‌ಎನ್‌ಡಿಎಂಸಿ ಮಾಹಿತಿ ಪ್ರಕಾರ, ಕಾವೇರಿ ನದಿ ಜಲಾಶಯಗಳು ಶೇ.66 ರಷ್ಟು ತುಂಬಿದ್ದು, ಕೃಷ್ಣಾ ನದಿಯ ಜಲಾಶಯಗಳು ಶೇ. 51ರಷ್ಟು ಭರ್ತಿಯಾಗಿವೆ. ನೀರು ಹೆಚ್ಚು ಸಂಗ್ರಹವಿರುವ ಜಲಾಶಯಗಳ…