• Mon. Sep 16th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸೂಲಿಕುಂಟೆ ಆನಂದ್ ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಅವರು ಮಾತನಾಡಿ, ಪಿಎಸ್‌ಐ ಪರಶುರಾಮ್ ಯಾದಗಿರಿ ಠಾಣೆಗೆ ವರ್ಗಾವಣೆಯಾಗಿ ಒಂದು ವರ್ಷ ಕೂಡ ಕಳೆದಿಲ್ಲ. ಏಳು ತಿಂಗಳಲ್ಲೇ ಮತ್ತೆ ವರ್ಗಾವಣೆ ಮಾಡಲಾಗಿದೆ. ಆದರೆ ನಗರ ಠಾಣೆಯಲ್ಲಿ ಮುಂದುವರೆಲು 30 ಲಕ್ಷ ನೀಡಬೇಕು ಎಂದು ಶಾಸಕ ಹಾಗೂ ಅವರ ಪುತ್ರ ಬೇಡಿಕೆಯಿಟ್ಟಿದ್ದರು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಪಿಎಸ್‌ಐ ವಸತಿ ಗೃಹದಲ್ಲಿ ಮೃತಪಟ್ಟಿದ್ದಾರೆ. ಈ ಸಾವಿಗೆ ಶಾಸಕ ಹಾಗೂ ಅವರ ಪುತ್ರ ಕಾರಣವೆಂದು ಆರೋಪಿಸಿದರು.

36 ವರ್ಷದ ಒಬ್ಬ ನಿಷ್ಠಾವಂತ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ತುಂಬಾ ನೋವಿನ ಸಂಗತಿ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ವರ್ಗಾವಣೆ ದಂಧೆಯಲ್ಲಿ ಸಂಪೂರ್ಣವಾಗಿ ಮುಳುಗಿ ಹೋಗಿದೆ ಎಂದರು. ಅವರ ಪತ್ನಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವಂತೆ ದೂರು ಕೊಟ್ಟರು ಪೊಲೀಸರು ಎಫ್‌ಐಆರ್ ದಾಖಲಿಸಲು ಮುಂದಾಗಲಿಲ್ಲ ನಂತರ ಇದೇ ವಿಷಯದ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು 18 ಗಂಟೆಗಳ ನಂತರ ಎಫ್‌ಐಆರ್ ದಾಖಲಿಸುತ್ತಾರೆ.

ಅಲ್ಲಿನ ಸ್ಥಳಿಯ ಶಾಸಕ ಮತ್ತು ಆತನ ಮಗನನ್ನು ಕೂಡಲೇ ಬಂಧಿಸಬೇಕು ಮತ್ತು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲವಾದ ಪಕ್ಷದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ತುಂಬಾ ದುರಂತ ಸಂಗತಿ. ಸರ್ಕಾರ ಈ ಕೂಡಲೇ ದಲಿತರಿಗೆ ಮೀಸಲಿಟ್ಟಿರುವ ಹಣವನ್ನು ದಲಿತರ ಅಭಿವೃದ್ಧಿಗೆ ಉಪಯೋಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಯ್ಯಪ್ಪ, ಆಟೋ ಕರ್ಣ, ಗೌತಮ್, ಶಿವು ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You missed

error: Content is protected !!