PLACE YOUR AD HERE AT LOWEST PRICE
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದಾರೆ. ನಾಳೆ (ಆಗಸ್ಟ್ 9) ಸಿದ್ಧರಾಮಯ್ಯ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ನ್ಯಾಯಾಧೀಶ ಸಂತೋಷ ಗಜಾನನ ಭಟ್ ದೂರನ್ನು ಪಡೆದಿದ್ದು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ.
ಇನ್ನು ದೂರುದಾರರ ಪರವಾಗಿ ಹೈಕೋರ್ಟ್‌ನ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಗುರುವಾರ ದೂರು ದಾಖಲಿಸಿದ್ದು ಹೈಕೋರ್ಟ್ ವಕೀಲ ವಸಂತ ಕುಮಾರ್ ವಕಾಲತ್ತು ವಹಿಸಿದ್ದಾರೆ.