PLACE YOUR AD HERE AT LOWEST PRICE
ಕೋಲಾರ:ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ತಿಂಡಿ ತಿಂದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿರುವ ಘಟನೆ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಹಾಸ್ಟೆಲ್ ನಲ್ಲಿ ತಿಂಡಿ ತಿಂದಿದ್ದ 20 ಮಕ್ಕಳು ಅಸ್ವಸ್ಥಗೊಂಡ ತಕ್ಷಣ ಅಸ್ವಸ್ಥ ಮಕ್ಕಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಮಕ್ಕಳು ದೋಸೆ,ಚೆಟ್ನಿ ತಿಂದಿದ್ದರು. ತಿಂಡಿ ತಿಂದ ನಂತರ ಮಕ್ಕಳಲ್ಲಿ ವಾಂತಿ ಬೇದಿ ಹಾಗೂ ಸುಸ್ತು ಕಾಣಿಸಿಕೊಂಡಿದೆ. ನಂತರ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಮಡೆದಿದೆ.