• Fri. Oct 11th, 2024

PLACE YOUR AD HERE AT LOWEST PRICE

ಚಿಕ್ಕಬಳ್ಳಾಪುರ ಆಗಸ್ಟ್ 14:ಅಂಗನವಾಡಿಯ ಫುಡ್ ಪಾಕೆಟ್ನಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.         ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿರುವ ಆಹಾರ ತಯಾರಿಕಾ ಘಟಕ ಹಾಗೂ ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ವೇಳೆ ಹಾಜರಿದ್ದು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಆಹಾರ ಪದಾರ್ಥಗಳ ಸ್ಯಾಂಪಲ್ನ್ನ ಪರಿಶೀಲಿಸಿ ಲ್ಯಾಬ್ಗೆ ಕಳಿಸಿಕೊಟ್ಟಿದ್ದಾರೆ.      ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಿಂದ ವಿತರಿಸಲಾಗಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂದಿಸಿದಂತೆ, ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆಹಾರ ಸುರಕ್ಷತಾ ವಿಭಾಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹರೀಶ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಬಾಗೇಪಲ್ಲಿ ಪಟ್ಟಣದಲ್ಲಿರುವ ಅಂಗನವಾಡಿಗಳ ಆಹಾರ ಪದಾರ್ಥಗಳನ್ನು ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ನಂತರ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಸಹ ಭೇಟಿ ನೀಡಿ ಮಾಹಿತಿ ಪಡೆದ್ದಾರೆ. ಬೆಲ್ಲದ ಪುಡಿ ಸೇರಿದಂತೆ ಹಲವು ಆಹಾರ ವಸ್ತುಗಳ ಸ್ಯಾಂಪಲ್ ಪಡೆದು ಲ್ಯಾಬ್ ಗೆ ಕಳಿಸಿದ್ದಾರೆ. ಇನ್ನು ಘಟನೆ ಸಂಬಂಧ ವರದಿಯನ್ನ ಸರಕಾರಕ್ಕೆ ಕಳಿಸಿದ್ದು, ಜೊತೆಗೆ ಬೆಲ್ಲದ ಪುಡಿಯನ್ನ ಸಪ್ಲೆ ಮಾಡಿದ್ದ ಕೋಲಾರದ ಮಾರುತಿ ಟ್ರೇಡರ್ಸ್ ಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್ ಸತ್ಯನಾರಾಯಣರೆಡ್ಡಿ, ಸಿಡಿಪಿಓ ರಾಮಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಏನಿದು ಪ್ರಕರಣ?

ಅಂಗನವಾಡಿ ಕೇಂದ್ರದಲ್ಲಿ ಚಿಕ್ಕಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ನೀಡುವ ಆಹಾರವು ತೀರಾ ಕಳಪೆಯಾಗಿದ್ದು ಸೇವಿಸಲು ಯೋಗ್ಯವಾಗಿಲ್ಲ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.

 ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ ಆಹಾರ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ಆರೋಪಿಸಿದ್ದರು.

 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ‌.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ. ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ :-

ಘಟನೆಯ ನಂತರ ಸಾರ್ವಜನಿಕ ವಲಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಪೂರೈಕೆ ಆಗಿರುವ ಆಹಾರ ಪದಾರ್ಥ ಪರೀಕ್ಷಿಸ ಬೇಕಾದ ಅಧಿಕಾರಿಗಳು ಯಾವುದೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪೂರೈಕೆ ಆಗಿರುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷೆ ನಡೆಸುವುದಿಲ್ಲ.

ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ನಿರ್ಲಕ್ಷ ವಹಿಸುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದರು. ಹೀಗಾಗಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು.

Related Post

ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ
ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ

Leave a Reply

Your email address will not be published. Required fields are marked *

You missed

error: Content is protected !!