• Wed. Sep 18th, 2024

ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನಲ್ಲಿ ಮೀಸಲು:ಸಿ.ಎಂ.ಸಿದ್ದುಗೆ ಅಭಿನಂದನೆ.

PLACE YOUR AD HERE AT LOWEST PRICE

ಕೋಲಾರ:ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಎಲ್ಲಾ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನ ಕಲ್ಪಿಸಿರುವ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ಬಂಗಾರಪೇಟೆ ಪುರಸಭೆ ಉಪಾಧ್ಯಕ್ಷ ಕುಂಬಾರ ಪಾಳ್ಯ ಮಂಜುನಾಥ್ ತಿಳಿಸಿದರು.            

ಅವರು ಕೋಲಾರದ ಕನಕ ಮಂದಿರದಲ್ಲಿ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದ ಹಿಂದುಳಿದ ವರ್ಗಗಳ ಗುತ್ತಿಗೆದಾರರು ಕಾಮಗಾರಿಗಳನ್ನು ಪಡೆದುಕೊಳ್ಳಲು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದರು.

ಇದನ್ನು ಮನಗಂಡ ಸರ್ಕಾರ ಮಾನ್ಯ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಹಿಂದುಳಿದ ವರ್ಗಗಳ ಹಿತವನ್ನು ಕಾಯುವ ಕೆಲಸವನ್ನು ಮಾಡಿದ್ದಾರೆ ಎಂದರು.                                    

ನೂತನ ಕಾಯ್ದೆಯಿಂದಾಗಿ ಹಿಂದುಳಿದ ವರ್ಗಗಳ ಗುತ್ತಿಗೆದಾರರು ಕಾಮಗಾರಿಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ತುಂಬಾ ಅನುಕೂಲವಾಗಿದೆ. ಈ ರೀತಿಯ ಒಂದು ಮಹತ್ತರ ಕಾಯ್ದೆ ಬರಲು ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಮತ್ತು ಸಂಘ ಸಂಸ್ಥೆಗಳ ಮುಖಂಡರುಗಳಿಗೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ  ಜಯರಾಮ್, ಪ್ರಧಾನ ಕಾರ್ಯದರ್ಶಿ ಸಂತೋಷ್ ವಿ.ಎಲ್, ಉಪಾಧ್ಯಕ್ಷ ಗೋಪಾಲಕೃಷ್, ಖಜಾಂಚಿ ಶ್ರೀಕಾಂತ್,  ಮುಖಂಡರುಗಳಾದ ಕೆಂಬೋಡಿ ಶ್ರೀನಿವಾಸ್, ಸಾಗರ್, ತರುಣ್, ನರೇಶ್, ರವಿ, ಮಂಜುನಾಥರಾಜು, ರಘು ಮೊದಲಾದವರಿದ್ದರು.

Leave a Reply

Your email address will not be published. Required fields are marked *

You missed

error: Content is protected !!