• Fri. Oct 18th, 2024

ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ

PLACE YOUR AD HERE AT LOWEST PRICE

ಕೋಲಾರ, ಅ.07  : ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆಯನ್ನು  ಪ್ರಾರಂಭಿಸಲಾಗಿದೆ.
ರಾಜ್ಯದ ಶೇಕಡ 70ರಷ್ಟು ಜನರಿಗೆ  ಸ್ಥಳೀಯ ಸಂಸ್ಥೆಯಾದ  ಗ್ರಾಮ ಪಂಚಾಯಿತಿಗಳಿಂದ ಶೇಕಡ 70 ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ  ಸದಸ್ಯರ ಹಾಗೂ ಪಿಡಿಒ  ಎಲ್ಲಾ ಸಿಬ್ಬಂದಿ ವರ್ಗ   ಕಾರ್ಯನಿರ್ವಹಣೆಯಲ್ಲಿ  ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ  ಸರ್ಕಾರ ಮತ್ತು ಇಲಾಖೆಗೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗೆ ಸ್ಪಂದಿಸದೆ,  ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸಿ, ಅನಿರ್ದಿಷ್ಟ ಅವಧಿ  ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದೆ ಎಂದು ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಸಂಪ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 ಈಗಾಗಲೇ ಹಿಂಪಡೆಯಲಾಗಿರುವ 2007- 2008 ರಿಂದ 2011- 2012 ಸಾಲಿನ ನೆರೆಗಾ ಲೋಕಾಯುಕ್ತ ಪ್ರಕರಣವನ್ನು  ಶಾಶ್ವತವಾಗಿ ಮುಕ್ತಾಯಗೊಳಿಸಿ, ಲೋಕಾಯುಕ್ತಕ್ಕೆ ಮಾಹಿತಿ ನೀಡಬೇಕು. ಗ್ರಾಮ ಪಂಚಾಯಿತಿಗಳು ಮೇಲ್ದರ್ಜೆಗೇರಿಸಿದ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಅಲ್ಲಿನ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ವಿಲೀನಗೊಳಿಸಬೇಕು. ಕುಂದು-ಕೊರತೆ ಪ್ರಾಧಿಕಾರವನ್ನು ಪೋಲೀಸ್ ಇಲಾಖೆ ಮಾದರಿಯಲ್ಲೇ ಸದೃಢಗೊಳಿಸುವುದು ಮತ್ತು ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಆಡಳಿತ ಪದ್ಧತಿ ಜಾರಿಗೊಳಿಸುವುದು ಹಾಗೂ ಸೇವಾ ವಿಷಯಗಳನ್ನು  ಸಕಾಲ ವ್ಯಾಪ್ತಿಗೆ ತರುವುದು  ಹಾಗೂ ಎಲ್ಲಾ ತಂತ್ರಾಂಶಗಳಿಗೆ  ಏಕರೂಪ ಸಹಾಯ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಿಡಿಒ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಹೇಶ್ ಕುಮಾರ್, ಪಿಡಿಒ ಸುರೇಶ್ ಬಾಬು, ದೀಪಾ, ರಮೇಶ್ ನಾಯಕ್, ಸುರೇಶ್ ಕುಮಾರ್, ಸಿಆರ್ ಗೌಡ, ಪಿಡಿಒ ರಾಮಕೃಷ್ಣಪ್ಪ, ಸರಸ್ವತಿ, ವೇಣು, ಮುನಿರತ್ನಂ, ರೇವಣ್ಣ ಹಾಗೂ ನೂರಾರು ಪಿಡಿಒ ಗಳು ಇತರರು ಇದ್ದರು.

Related Post

ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ ಕೇಳಲು ಗುತ್ತಿಗೆದಾರರಿಗೆ ನೈತಿಕತೆ ಇಲ್ಲ – ಎಂ.ಎಸ್.ನಾರಾಯಣಸ್ವಾಮಿ
ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ

Leave a Reply

Your email address will not be published. Required fields are marked *

You missed

error: Content is protected !!