PLACE YOUR AD HERE AT LOWEST PRICE
ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಒದ್ದಾಡಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ಸಿಂಚನಾ ಪತಿ ಮಂಜುನಾಥ್ ಜೀವಾಪಾಯದಿಂದ ಪಾರಾಗಿದ್ದಾರೆ. ಸಿಂಚನಾರ ಹೊಟ್ಟೆಯಲ್ಲಿದ್ದ ಮಗುವಿಗೆ ಆಗಸ್ಟ್ 17ಕ್ಕೆ 8 ತಿಂಗಳು ಮುಗಿದು 9 ತಿಂಗಳು ತುಂಬುತ್ತಿತ್ತು. ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ನಲ್ಲಿ ದಾಬಸ್ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ದಾರಿ ಮಧ್ಯ ಟಿಪ್ಪರ್ ಡಿಕ್ಕಿ ಹೊಡೆದು ಗರ್ಭಿಣಿ ಮತ್ತು ಮಗು ಸಾವನ್ನಪ್ಪಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.