• Wed. Oct 23rd, 2024

PLACE YOUR AD HERE AT LOWEST PRICE

ಕೋಲಾರ : ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಮಾತನಾಡಿ, ಇತ್ತೀಚೆಗೆ ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಗೆಳತಿ ವರದಿಯನ್ನು ಸ್ವೀಕರಿಸಿದ್ದನ್ನು, ದಲಿತ ಸಂಘರ್ಷ ಸಮಿತಿಯ ಸ್ವಾಗತಿಸಿ, ಅಭಿನಂದನೆ ಸಲ್ಲಿಸುತ್ತದೆ ಎಂದರು.

ರಾಜ್ಯದ ಜನಸಂಖ್ಯೆಯ ಬಹುಭಾಗವಾಗಿರುವ ಆದಿವಾಸಿಗಳು ಅಲೆಮಾರಿಗಳು ದಲಿತರು ಹಿಂದುಳಿದವರು ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾ ಬಂದಿದೆ. ಆದರೆ ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಉದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಹೊಣೆಗಾರಿಕೆಯಿಂದ ನುಣಚಿಕೊಳ್ಳುತ್ತಿದ್ದವು. ಇದರಿಂದಾಗಿ ಸಮಾಜದಲ್ಲಿ ಅಸಮಾನತೆಯ ಕಂದಕಗಳು ಮತ್ತು ಹೆಚ್ಚಾಗುತ್ತಲೇ ಬರುತ್ತಿತ್ತು ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಗುರುಗಳನ್ನು ತಲುಪುವ ಕಾಲ ಕಾಲಕ್ಕೆ ಜಾತಿಗಣತಿಯ ನಿಖರ ವಿವರಗಳನ್ನು ಆಧರಿಸಿ ಇನ್ನಿತರ ಯೋಜನೆಗಳನ್ನು ರೂಪಿಸುವುದು ಅನಿವಾರ್ಯ ಈ ಕೊರತೆಯನ್ನು ತಮ್ಮ ಸರಕಾರವನ್ನು ನೀಗಿಸಲೋರಟಿರುವುದು ಇರುವುದು ನಿಜಕ್ಕೂ ಅಭಿನಂದನಾರ್ಹ.

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜಾತಿ ಗಣತಿ ವರದಿ ಜಾರಿಗೆ ಅಪಸ್ವರ ಎತ್ತಿದ್ದು, ಸಾಮಾಜಿಕ ಸುಧಾರಣೆಗೆ ಅಡ್ಡಿ ಮಾಡುತ್ತಿದ್ದು, ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನಲೆ, ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ, ಸಿ.ಜೆ.ನಾಗರಾಜ್, ಬಂದಾರ್ಲಹಳ್ಳಿ ಮುನಿಯಪ್ಪ, ಸೀಪೂರು ದೇವರಾಜ್, ವಾಸು, ಮುದುವಾಡಿಹೊಸಹಳ್ಳಿ ಶ್ರೀರಾಮ, ಶ್ರೀನಿವಾಸ್, ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

Related Post

ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ. ಆದರೆ,‌ ರಾಜೀನಾಮೆ ನೀಡಲು ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ : ಮಾಜಿ ಸಂಸದ ಎಸ್.ಮುನಿಸ್ವಾಮಿ
ನಾವು ಆಸೆಗಳಿಗೆ ಮಿತಿಯಿಲ್ಲದೆ ಬದುಕುತ್ತೇವೆ,ಸಮಾಜಕ್ಕೆ ಒಂದಷ್ಟು ಕೊಡುಗೆಯಾಗಿ ನೀಡಿದಾಗ ನಮ್ಮ ಜನ್ಮ ಸಾರ್ಥಕವಾಗುತ್ತದೆ: ಶಿಕ್ಷಕ ಕೆ.ಹೆಚ್.ಸಂಪತ್ ಕುಮಾರ್
ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ 

Leave a Reply

Your email address will not be published. Required fields are marked *

You missed

error: Content is protected !!