• Thu. Oct 24th, 2024

PLACE YOUR AD HERE AT LOWEST PRICE

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ- ಅಪರ ಜಿಲ್ಲಾಧಿಕಾರಿ ಮಂಗಳ
ಕೋಲಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ( ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ  ಅಕ್ಟೋಬರ್ 27 ರಂದು  ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಯಾವುದೇ ಲೋಪ ದೋಷಗಳಿಲ್ಲದಂತೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಮಂಗಳ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ  ಅಕ್ಟೋಬರ್ 27 ರಂದು ಜರುಗುವ ಸ್ಪರ್ಧಾತ್ಮಕ ಪರೀಕ್ಷೆಯ ದಿನದಂದು ಬೆ 8.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಸಮಯ ಪರಿಪಾಲನೆ ಅತ್ಯವಶ್ಯಕವಾಗಿದ್ದು ಪರೀಕ್ಷಾ ಕೊಠಡಿಗಳಲ್ಲಿ ತಪ್ಪದೇ ಗೋಡೆ ಗಡಿಯಾರ ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷಗಳಿಗೆ ಆಸ್ಪದ ನೀಡದೇ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ಜರುಗಲು ವೀಕ್ಷಕರು, ಜಿಲ್ಲಾ ಮಟ್ಟದ ತ್ರಿ ಸದಸ್ಯ ಸಮಿತಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ  ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ  ಅಲ್ಪಸಂಖ್ಯಾತ ಇಲಾಖೆ ಉಪನಿರ್ದೇಶಕ ಮುರಳಿ, ಎಲ್ಲಾ ತಹಸೀಲ್ದಾರ್ ಗಳು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Post

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್
ಕಂದಾಯ ಸುಧಾರಣೆಗಳ ಅಧ್ಯಯನಕ್ಕೆ ಮಿಜೋರಾಂ ಸಚಿವ ಬಿ.ಲಾಲ್‌ಚಿಂಸೋವ ಉತ್ಸುಕತೆ
ಭೋವಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರನ್ನು ನಿಂದಿಸಿರುವ ಶಾಸಕ ಕೊತ್ತೂರು ಮಂಜುನಾಥ್ ಬಹಿರಂಗವಾಗಿ ಕ್ಷಮೆ ಕೇಳಬೇಕು : ಭೋವಿ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಲ್ ಜಿ ಮುನಿರಾಜು ಆಗ್ರಹ

Leave a Reply

Your email address will not be published. Required fields are marked *

You missed

error: Content is protected !!