• Thu. May 2nd, 2024

ಕೋಲಾರ I ಭಾರತ ಜೋಡೋ ಸಮಾರೋಪ ಧ್ವಜಾರೋಹಣ ಭಾರತ ಜೋಡೋ ಜಾಥಾದಿಂದ ಭಾವೈಕ್ಯತೆ ಬೆಸುಗೆ – ಲಕ್ಷ್ಮೀನಾರಾಯಣ್

PLACE YOUR AD HERE AT LOWEST PRICE

ಕಾಂಗ್ರೆಸ್ ಯುವ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯಿಂದಾಗಿ ದೇಶಾದ್ಯಂತ ಭಾವೈಕ್ಯತೆ ಬೆಸೆಯುವಲ್ಲಿ ಸಾಧ್ಯವಾಗಿದೆಯೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಹೇಳಿದರು.

ಕೋಲಾರ ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಭಾರತ ಜೋಡೋ ಸಮಾರೋಪದ ಭಾಗವಾಗಿ ಭಾರತ ರಾಷ್ಟ್ರೀಯ ಧ್ವಜಾರೋಹಣ ಮಾಡಿ, ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಕನ್ಯಾಕುಮಾರಿಯಿಂದ ಆರಂಭವಾದ ಕಾಂಗ್ರೆಸ್ ಜೋಡೋ ಯಾತ್ರೆಯು ಸುಮಾರು ೪ಸಾವಿರ ಕಿ.ಮೀ ಗಳನ್ನು ಕ್ರಮಿಸಿ ನಿಗದಿತ ವೇಳಾಪಟ್ಟಿಯಂತೆ ಹುತಾತ್ಮದಿನಾಚರಣೆಯಂದು ಸಂಪನ್ನವಾಗುತ್ತಿದೆ. ಜೋಡೋ ಯಾತ್ರೆಯಿಂದ ಒಡೆದ ಮನಸುಗಳು ಒಂದುಗೂಡಿವೆ, ಭಾರತೀಯರು ಐಕ್ಯಗೊಂಡಿದ್ದಾರೆಂದು ವಿವರಿಸಿದರು.

ಅಹಿಂಸೆಯನ್ನು ಜಗತ್ತಿಗೆ ಸಾರಿ ನಾಥೋರಾಂ ಗೋಡ್ಸೆ ಗುಂಡಿಗೆ ಬಲಿಯಾದ ಮಹಾತ್ಮ ಗಾಂಽ ಮತ್ತು ಇತರೇ ಮಹಾನ್ ನಾಯಕರ ಆದರ್ಶಗಳಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಮುನ್ನಡೆಸುವುದಾಗಿ ಅವರು ಘೋಷಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ, ಜನರ ನಡುವೆ ದ್ವೇಷ ಹರಡಿ ದೇಶವನ್ನು ಕೋಮುವಾದದ ಮೂಲಕ ವಿಭಜನೆ ಮಾಡುತ್ತಿರುವ ಬಿಜೆಪಿ ಸರಕಾರಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಿತ್ತೊಗೆದು,ರಾಹುಲ್ ಗಾಂಧಿ ನೇತೃತ್ವದ ಸರಕಾರ ರಚಿಸಲು ಭಾರತ ಜೋಡೋ ಸಹಕಾರಿಯಾಗಿದೆಯೆಂದರು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್‌ಸಿ ವಿಭಾಗದ ಅಧ್ಯಕ್ಷ ಕೆ.ಜಯದೇವ್, ಎಸ್‌ಟಿ ವಿಭಾಗದ ಅಧ್ಯಕ್ಷನಾಗರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಗಂಗಮ್ಮನಪಾಳ್ಯ ರಾಮಯ್ಯ, ಲಾಲ್‌ಬಹಾದ್ದೂರುಶಾಸ್ತ್ರಿ, ಪ್ಯಾರೇಜಾನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಹುತಾತ್ಮ ದಿನದ ನೆನಪಿನಲ್ಲಿ ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಸುದ್ದಿ ಓದಿ ಹಂಚಿ

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!