• Fri. May 3rd, 2024

PLACE YOUR AD HERE AT LOWEST PRICE

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಂಕಷ್ಟಗಳಿಗೆ ನೆರವಾಗ ಬೇಕಾದರೆ ಸರ್ಕಾರಿ ನೌಕರರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಉಪಾಧ್ಯಕ್ಷರಾದ ಎಂ ರಾಮಕೃಷ್ಣ ಅಭಿಪ್ರಾಯಪಟ್ಟರು.

ನಗರದ ಬುದ್ಧ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯು ಇತ್ತೀಚಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮ ಅಭಿವೃದ್ಧಿ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೊಂಡರಾಜನಹಳ್ಳಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ರಾಮಕೃಷ್ಣ ರವರಿಗೆ ನೀಡಿದ ಆತ್ಮೀಯ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸೇವೆ ನಮ್ಮ ಮೂಲ ಮಂತ್ರವಾಗಬೇಕು. ಬಡವ ಬಲ್ಲಿದ ಎಂಬ ಭೇದ ಭಾವ ಮರೆತು ತಮ್ಮ ಕೆಲಸಕ್ಕಾಗಿ ಸರ್ಕಾರಿ ನೌಕರರ ಕಚೇರಿಗೆ ಅಲೆಯುವ ಸಾರ್ವಜನಿಕರ ಸೇವೆಯೇ ನಮ್ಮ ಮೂಲ ಮಂತ್ರವಾಗಬೇಕು. ಈ ದೆಸೆಯಲ್ಲಿ ದೇವ ಮನೋಭಾವ ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಸರ್ಕಾರ ನೀಡಿರುವ ನೀತಿ ನಿಯಮಗಳನ್ನು ಪಾಲಿಸಿಕೊಂಡು ಬರುವ ಮೂಲಕ ಜನಸಾಮಾನ್ಯರ ಸಂಕಷ್ಟಗಳಿಗೆ ಬರವಾಗುವಲ್ಲಿ ನಮ್ಮನ್ನೇ ತಾವು ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಗೌರವಾಧ್ಯಕ್ಷ ಜಿ ಶ್ರೀನಿವಾಸ್ ಮಾತನಾಡಿ ತಮ್ಮ ಕೆಲಸದ ನಿಮಿತ್ತ ಕಚೇರಿಗಳಿಗೆ ಸುತ್ತಾಡುವ ಜನಸಾಮಾನ್ಯರ ಸಂಕಷ್ಟಗಳಿಗೆ ಆಯಾ ಸಂಬAಧಪಟ್ಟ ಸರ್ಕಾರಿ ನೌಕರರು ಸ್ಪಂದಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ರಾಮಾಂಜನೇಯ, ಮುಖಂಡರಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು, ಡಿ.ಎನ್. ಮುಕುಂದ. ಡಾ. ನಾರಾಯಣಸ್ವಾಮಿ.ಸುನಿತಾ ಕೃಷ್ಣಮೂರ್ತಿ, ಸಿ.ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!