• Thu. May 2nd, 2024

PLACE YOUR AD HERE AT LOWEST PRICE

ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಜಿಲ್ಲಾ ವೆಟರನ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಸಹಭಾಗಿತ್ವದಲ್ಲಿ ಫೆ.11, 12ರಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 41ನೇ ರಾಜ್ಯ ಹಿರಿಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಅಧ್ಯಕ್ಷ ರಂಗನಾಥ್ ತಿಳಿಸಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.11 ಬೆಳಿಗ್ಗೆ 8 ಗಂಟೆಗೆ ಕ್ರೀಡಾಪಟುಗಳೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಾಥಾವನ್ನು ನಡೆಸಲಾಗುವುದು. ನಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

30 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು. ರಾಜ್ಯ ಕ್ರೀಡಾಕೂಟದಲ್ಲಿ ವಿಜೇತರಾದವರನ್ನು ಮಾರ್ಚ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ 42ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಉಚಿತ ಊಟ, ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. 30 ರಿಂದ 50 ವರ್ಷದವರೆಗೆ 500ರೂ, 65 ರಿಂದ 75 ವರ್ಷದವರಿಗೆ 350ರೂ. ಹಾಗೂ 75ಕ್ಕಿಂತ ಹೆಚ್ಚಿನ ವಯಸ್ಕರಿಗೆ ರೂ.100 ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಫೆ.5 ರೊಳಗೆ ನೋಂದಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಕಾರ್ಯದರ್ಶಿ ನಾಗೇಶ್ ದೂ. ಸಂಖ್ಯೆ 9483663666 ಸಂಪರ್ಕಿಸಬಹುದು ಎಂದು ತಿಳಿಸಿದರು.

ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆಯ ಸದಸ್ಯ ಪಿ.ಎಸ್.ಬಿ ನಾಯ್ಡು(ಬಾಲು) ಮಾತನಾಡಿ, ರಾಜ್ಯದ ಮೂಲೆ ಮೂಲೆಗಳಿಂದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲು ಕ್ರೀಡಾಪಟುಗಳು ನೊಂದಾಯಿಸಿಕೊಂಡಿದ್ದಾರೆ. ಈಗಾಗಲೇ 300 ಜನಕ್ಕೂ ಅಧಿಕ ಕ್ರೀಡಾಪಟುಗಳು ನೊಂದಾಯಿಸಿದ್ದು ಅದರಲ್ಲಿ 80 ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಫೆ.5 ರ ನಂತರ ನೋಂದಾಯಿಸಿಕೊಳ್ಳುವುದಿಲ್ಲ ಎಂದರು.

ಆರೋಗ್ಯದ ದೃಷ್ಟಿಯಿಂದ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕೋಲಾರ ಜಿಲ್ಲೆಯಲ್ಲಿ ಹಿರಿಯ ಕ್ರೀಡಾಪಟುಗಳು ಸುಮಾರು ಜನ ಇದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲೂ ವಿಜೇತರಾಗಿದ್ದಾರೆ ಅವರ ಮಾರ್ಗದರ್ಶನದಲ್ಲಿ ಮತ್ತು ಸಂಸ್ಥೆಯ ಪದಾಧಿಕಾರಿಗಳ ತರಬೇತಿ ಪಡೆದು ಕ್ರೀಡಾಕೂಟದಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವೆಟರನ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಅಧ್ಯಕ್ಷ ವಿ,ಸದಾಶಿವರೆಡ್ಡಿ ಉಪಾಧ್ಯಕ್ಷ ಕೆ.ಜಯದೇವ್, ಖಜಾಂಚಿ ಕೆ.ರೋಹನ್ ಕುಮಾರ್, ನಿರ್ದೇಶಕಿ ಕೆ.ಆರ್.ರಾಜರಾಜೇಶ್ವರಿ, ಸುಜಾತ ಜಯರಾಮ್ ಮತ್ತಿತರರು ಹಾಜರಿದ್ದರು.

 

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!