• Sat. May 4th, 2024

PLACE YOUR AD HERE AT LOWEST PRICE

ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಜೆಟ್‌ನಲ್ಲಿ ಕೋಲಾರ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿಗಾಗಿ ಜನಪರ ವೇದಿಕೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಜನಪರ ವೇದಿಕೆ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಜಿಲ್ಲೆಯ ಅಭಿವೃದ್ಧಿಯ ಕಣ್ಣೋಟ ಇಟ್ಟುಕೊಂಡು ಬಜೆಟ್ ಪೂರ್ವಭಾವಿಯಾಗಿ ಪ್ರತಿಯೊಂದು ಪಕ್ಷದ ಜನಪ್ರತಿನಿಧಿಗಳಿಗೆ ಮನವಿಗಳನ್ನು ಸಲ್ಲಿಸಿದ್ದರೂ ಹೋರಾಟ, ಸಮಾವೇಶಗಳ ಮೂಲಕ ಒತ್ತಾಯಿಸಿದರು ಒಂದೇ ಒಂದು ಬೇಡಿಕೆ ಈಡೇರಿಸಲು ಸರಕಾರಗಳಿಂದ ಸಾಧ್ಯವಾಗಲಿಲ್ಲ ಸರಕಾರಗಳು ಬಜೆಟ್ ನಲ್ಲಿ ಅನುದಾನಗಳನ್ನು ನೀಡದೇ ಜಿಲ್ಲೆಯನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಜನರ ಭವಿಷ್ಯ ಹಾಗೂ ಮುಂದಿನ ಪೀಳಿಗೆಗಾಗಿ ಶಾಶ್ವತ ನೀರಾವರಿ ಯೋಜನೆಗಳ ಜಾರಿಗಾಗಿ ಜನಪರ ಚಳುವಳಿಗಳು ಸಮರಧೀರ ಹೋರಾಟಗಳೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಹೋರಾಟಗಳನ್ನು ನಡೆಸುತ್ತಿವೆ. ಯಾವುದೇ ನದಿನಾಲೆಗಳು ಇಲ್ಲದಿದ್ದರೂ ಹಾಲು, ರೇಷ್ಮೆ, ಮಾವು, ಟಮೋಟೊ, ಆಲೂಗಡ್ಡೆ, ತರಕಾರಿ ಸೇರಿದಂತೆ ಹಲವಾರು ಬೆಳೆಗಳನ್ನು ಬೆಳೆಯುತ್ತಾ ಇದ್ದಾರೆ ಆದರೆ ಸರಕಾರಗಳು ಮಾತ್ರ ಪ್ರತಿಯೊಂದು ಬಜೆಟ್ ನಲ್ಲಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿಕೊಂಡು ಬಂದಿದ್ದಾರೆ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಜನರು ಇಂತಹ ಜನವಿರೋಧಿ ಸರಕಾರಗಳಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದರು

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಮುಖಂಡ ಪಿ.ಶ್ರೀನಿವಾಸ್ ಮಾತನಾಡಿ ಜಿಲ್ಲೆಯೂ ರಾಜಧಾನಿಗೆ ಹತ್ತಿರವಿದ್ದರೂ ಅಭಿವೃದ್ಧಿಯಲ್ಲಿ ಮಾತ್ರ ಮರೀಚಿಕೆಯಾಗಿದೆ ಜಿಲ್ಲೆಯ ಅಭಿವೃದ್ಧಿಯ ಭಾಗವಾಗಿರುವ ಕುಡಿಯಲು ಮತ್ತು ಕೃಷಿಗೆ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿಮಾಡಿ ಕೆ.ಸಿ. ವ್ಯಾಲಿಯ 3ನೇ ಹಂತದ ಶುದ್ದೀಕರಣಕ್ಕೆ ಪ್ರಮುಖವಾಗಿ ಒತ್ತಾಯಿಸಲಾಗಿತ್ತು ಜೊತೆಗೆ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ ಮಾಡಿ ಸುಸಜ್ಜಿತವಾದ ಸರ್ಕಾರಿ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್, ಪಶು ವೈದ್ಯಕೀಯ ಕಾಲೇಜು, ಇಎಸ್‌ಐ ಆಸ್ಪತ್ರೆ, ಬಿಜಿಎಂಲ್ ಪುನರ್ ನಿರ್ಮಾಣ ಮಾಡುವಂತೆ ಜನಪರ ವೇದಿಕೆ ವತಿಯಿಂದ ಸಂಬಂಧಪಟ್ಟವರ ಮೇಲೆ ಒತ್ತಡ ಹಾಕಿದರೂ ಯಾವುದೇ ಒಂದು ಯೋಜನೆ ಜಾರಿ ಮಾಡಿಲ್ಲ ಸರಕಾರದ ಕ್ರಮದ ವಿರುದ್ದ ಬೇಸರ ವ್ಯಕ್ತಪಡಿಸಿದರು.

ರೈತ ಮುಖಂಡ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ಜಿಲ್ಲೆಯಲ್ಲಿ ಸುಮಾರು 75 ದಿನಗಳ ಕಾಲ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ಅಭಿವೃದ್ಧಿಯ ಜನಾಗ್ರಹ ಜಾಥದ ಮೂಲಕ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ ಜೊತೆಗೆ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಜಿಲ್ಲೆಯ ಅಭಿವೃದ್ಧಿಯ ಕಣೋಟವಿಲ್ಲದ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಸರ್ಕಾರ ಜಿಲ್ಲೆಯನ್ನು ಕಡೆಗಣಿಸುತ್ತಿರುವುದರಿಂದ ಜಿಲ್ಲೆಯ ಜನತೆಯಲ್ಲಿ ಜಾಗೃತಿ ಮೂಡಿಸಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಗಳನ್ನು ರೂಪಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೆಎಂಎಸ್ ಮುಖಂಡರಾದ ವಿ.ಗೀತಾ ಮಾತನಾಡಿ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಿಲ್ಲೆ ಮಾತ್ರ ಅಭಿವೃದ್ಧಿಯಾಗಿಲ್ಲ ಕೂಡಲೇ ಸರಕಾರಗಳು ರೈತರಿಗೆ ಮಹಿಳೆಯರಿಗೆ ನಿರುದ್ಯೋಗ ಯುವಕರಿಗೆ ಉದ್ಯೋಗಗಳನ್ನು ನೀಡುವ ಯೋಜನೆಗಳನ್ನು ರೂಪಿಸಬೇಕಾಗಿದೆ ಜೊತೆಗೆ ಹೈನುಗಾರಿಕೆ, ಮಹನೀಯರ ಅಧ್ಯಯನ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಜನರೇ ನಿಮಗೆ ಬುದ್ದಿಕಲಿಸುತ್ತಾರೆ ಸರಕಾರ ಮತ್ತು ಜಿಲ್ಲಾಡಳಿತ ಕೂಡಲೇ ಎಚ್ಚತ್ತುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಜನಪರ ವೇದಿಕೆ ಮುಖಂಡರಾದ ಟಿ.ಎಂ ವೆಂಕಟೇಶ್, ಕಲಾವಿದ ಸ್ವಾಮಿ, ಎ.ಆರ್ ಬಾಬು, ಪಾತಕೋಟೆ ನವೀನ್, ತಂಗರಾಜ್, ಎಂ ವಿಜಯಕೃಷ್ಣ, ಆಶಾ, ಅಶೋಕ್, ಪುಣ್ಯಹಳ್ಳಿ ಶಂಕರ್, ಭೀಮರಾಜ್, ಕೇಶವರಾವ್, ವೀರಪ್ಪರೆಡ್ಡಿ, ಅಂಜಲಪ್ಪ, ಮಂಜುಳ, ಅಪ್ಪಯ್ಯಣ್ಣ, ಮುಂತಾದವರು ಇದ್ದರು.

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!