• Sat. May 18th, 2024

ವಿದ್ಯಾರ್ಥಿ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಆತ್ಮಸ್ಥೆೈರ್ಯ ಬಹುಮುಖ್ಯ -ಸಿ.ಆರ್.ಅಶೋಕ್

PLACE YOUR AD HERE AT LOWEST PRICE

ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಅಂಕಗಳು ಎಷ್ಟು ಮುಖ್ಯವೋ ಹಾಗೆಯೇ ಮೌಲ್ಯಗಳು ಸಹ ಜೀವನ ರೂಪಿಸಿಕೊಳ್ಳಲು ಹೆಚ್ಚು ಸಹಕಾರಿಯಾಗುತ್ತದೆ ಎಂದು ವಿಷಯ ಪರಿವೀಕ್ಷಕ ಸಿ.ಆರ್.ಅಶೋಕ್ ಅಭಿಪ್ರಾಯಿಸಿದರು.

ನಗರದ ರಂಗಮಂದಿರದಲ್ಲಿ ನಡೆದ ಶ್ರೀ ಬಾಬಾ ವಿದ್ಯಾ ಸಂಸ್ಥೆಯ ೧೭ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿ, ಮೌಲ್ಯಗಳು ಇಲ್ಲದೆ ಅಂಕಗಳು ಯಾವುದೇ ಕೆಲಸಕ್ಕೆ ಬರುವುದಿಲ್ಲ. ಅಂಕಗಳ ಜೊತೆ ಜೊತೆಯಲ್ಲೇ ಮೌಲ್ಯಗಳನ್ನು ಸಹ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದರು

ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಹೊರಬರಲು ಶಾಲಾ ವಾರ್ಷಿಕೋತ್ಸವಗಳು ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿವೆ. ಈ ಮೂಲಕ ಪ್ರತಿಭೆಗಳಿಗೆ ಸೂಕ್ತ ಅವಕಾಶಗಳು ಒದಗಿಬರಲು ವ್ಯವಸ್ಥೆಯಾಗುತ್ತದೆ ಎಂದು ತಿಳಿಸಿದರು. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ದಾರಿಯಲ್ಲಿ ಸಾಗಬೇಕು. ಕೆಲ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕವನ್ನು ಪಡೆದು ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಆದರೆ ಬಾಬಾ ವಿದ್ಯಾ ಸಂಸ್ಥೆ ಕಡಿಮೆ ಶುಲ್ಕವನ್ನು ಪಡೆದು ಉತ್ತಮ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.

ಪರೀಕ್ಷೆಗಳಲ್ಲಿ ಅಂಕ ಗಳಿಸುವ ಮೂಲಕ ಗುರಿ ಮುಟ್ಟಿದರೆ ನಿಮ್ಮನ್ನು ತಲೆ ಎತ್ತಿ ನಿಲ್ಲುವಂತೆ ಶಿಕ್ಷಣ ಮಾಡುತ್ತದೆ. ಈ ನಿಟ್ಟಿನಲ್ಲಿ ಪೋಷಕರ ಪ್ರೀತಿ, ವಿಶ್ವಾಸವನ್ನು ಗಳಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪಗೊಳ್ಳಬೇಕೆಂದರು.

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಬಹುತೇಖ ಖಾಸಗಿ ಶಿಕ್ಷಣ ಸಂಸ್ಥೆಗಳು ಆಂಗ್ಲ ಭಾಷೆಗೆ ಹೆಚ್ಚು ಆದ್ಯತೆಯನ್ನು ನೀಡುತ್ತಿದೆ. ಆದರೆ ಬಾಬಾ ವಿದ್ಯಾ ಸಂಸ್ಥೆ ಮಾತ್ರ ಮಾತೃ ಭಾಷೆಗೆ ಆದ್ಯತೆಯನ್ನು ನೀಡಿ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಮೆರೆಯುತ್ತಿದೆ. ಈ ದಿಸೆಯಲ್ಲಿ ಸಾಹಿತ್ಯ ಬರೆಯುವ ಮತ್ತು ಓದುವ ಹವ್ಯಾಸವನ್ನು ಮಾಡುತ್ತಿದೆ ಎಂದರು.

ಪೋಷಕರು ಮಕ್ಕಳನ್ನು ಅಂಕಗಳಿಗೆ ಮಾತ್ರ ಸೀಮಿತಗೊಳಿಸದೆ ವಿದ್ಯಾರ್ಥಿಗಳು ಜೀವನದಲ್ಲಿ ಬರುವ ಸವಾಲುಗಳನ್ನು ಆತ್ಮಸ್ಥೈರ್ಯದಿಂದ ಎದರಿಸುವ ಮನೋಭಾವವನ್ನು ಈಗಿನಿಂದಲೇ ಬೆಳಸುವಂತಾಗಬೇಕೆಂದರು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಸಂಸ್ಕಾರವನ್ನು ಸಮಾಜದ ಅಸ್ತಿಯಾಗಿಸಿ ಇತರರಿಗೆ ಮಾದರಿಯಾಗುವಂತೆ ಮುನ್ನಡೆಯಬೇಕೆಂದರು.

ಶ್ರೀ.ಬಾಬಾ ವಿದ್ಯಾ ಸಂಸ್ಥೆಯ ರಾಮಚಂದ್ರಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ರಜಾ ಅವಧಿಯಲ್ಲಿ ಕನ್ನಡ ಭಾಷೆಯ ವ್ಯಾಮೋಹವನ್ನು ಮೈಗೂಡಿಸಲು ಕನ್ನಡ ಕಲಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜನೆಗೆ ಚಿಂತನೆ ಮಾಡಲಾಗಿದೆ ಎಂದರಲ್ಲದೆ, ಈ ದಿಸೆಯಲ್ಲಿ ಪೋಷಕರು ಸಹಕಾರ ನೀಡಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಘಟಕ ಪಿ.ಪರಮೇಶ್ವರನ್, ತಾಲೂಕು ಗೌರವಾಧ್ಯಕ್ಷ ಟಿ.ಸುಬ್ಬರಾಮಯ್ಯ, ಸಹಕಾರ ಒಕ್ಕೂಟದ ನಿರ್ದೇಶಕಿ ಅರುಣಮ್ಮ, ನರ್ಮದಾ ಸಹಕಾರ ಸಂಘದ ನಿರ್ದೇಶಕಿ ಅಂಬಿಕಾ, ಪ್ರಥಮ ದರ್ಜೆ ಸಹಾಯಕಿ ಸವಿತಾ ಉಪಸ್ಥಿತರಿದ್ದರು.

ಉಷಾ ಕಿರಣ್ ತಂಡದಿಂದ ಪ್ರಾರ್ಥನೆ, ವೇಣುಸುಂದರಗೌಡ ಸ್ವಾಗತಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!