• Tue. Apr 30th, 2024

PLACE YOUR AD HERE AT LOWEST PRICE

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು,ಬಿ.ಜೆ.ಪಿ. ಪಕ್ಷವು ರಾಜ್ಯದ ಜನರನ್ನು ನೇರವಾಗಿ ಸಂಪರ್ಕಿಸುವ ಮತ್ತು ಜನತೆಯ ಆಶೀರ್ವಾದ ಪಡೆಯುವ ಸದುದ್ದೇಶದಿಂದ ವಿಜಯ ಸಂಕಲ್ಪ ಯಾತ್ರೆಯನ್ನು ರಾಜ್ಯದ 31 ಜಿಲ್ಲೆಗಳ 224 ವಿಧಾನ ಸಭಾ ಕ್ಷೇತ್ರದಲ್ಲಿ 20 ದಿನಗಳ ಮೆಗಾ ರಾಲಿ ನಡೆಯಲಿದೆಯೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ಈಗಾಗಲೇ ಬೂತ್ ವಿಜಯ ಅಭಿಯಾನ,ವಿಜಯ ಸಂಕಲ್ಪ ಅಭಿಯಾನ ಗಳನ್ನು ಯಶಸ್ವಿಯಾಗಿ ರಾಜ್ಯದಲ್ಲಿ ನಡೆಸಲಾಗಿದ್ದು,ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಜನಾರ್ಶೀವಾದ ಮತ್ತು ಬೆಂಬಲ ಬೇಕಾಗಿರುವುದರಿಂದ ಪಕ್ಷದ ಯೋಜನೆಗಳ ಬಗ್ಗೆ ಹಾಗೂ ಆಗಿರುವ ಅಭಿವೃದ್ಧಿ ಬಗ್ಗೆ ಜನರಿಗೆ ನೇರವಾಗಿ ತಿಳಿಸಲು ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆಯೆಂದರು.
 ಪಕ್ಷದ ವತಿಯಿಂದ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಬಿಜೆಪಿ ವಿಜಯ ಸಂಕಲ್ಪ ಜಾತ್ರೆಗೆ ಚಾಲನೆ ದೊರೆಯಲಿದ್ದು,ದಿನಾಂಕ:01/03/2023 ರಂದು ಮಲೆ ಮಾದೇಶ್ವರ ಬೆಟ್ಟದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರು ಚಾಲನೆ ನೀಡುವರು. ದಿನಾಂಕ:02/03/2023 ರಂದು ನಂದಗಡದ ಸಂಗೊಳ್ಳಿ ರಾಯಣ್ಣ ಸ್ಮಾರಕ ಬಳಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಚಾಲನೆ ನೀಡುವರು. ದಿನಾಂಕ: 03/03/2023 ರಂದು ಬೀದರ್ ನ ಬಸವಕಲ್ಯಾಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಚಾಲನೆ ನೀಡಲಿದ್ದು, ಅದೇ ದಿನ ಅಮಿತ್ ಷಾ ರವರಿಂದ ಬೆಂಗಳೂರಿನ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದ ಕೆಂಪೇಗೌಡ ಪ್ರತಿಮೆ ಬಳಿ ಚಾಲನೆ ನೀಡಲಿದ್ದಾರೆಂದು ವಿವರಿಸಿದರು.
ರಥಯಾತ್ರೆ ಕೋಲಾರ ಜಿಲ್ಲೆಗೆ ಮಾರ್ಚ್ 12 ರಂದು ಮಧ್ಯಾಹ್ನ 01:30 ಗಂಟೆಗೆ ಮಾಲೂರಿಗೆ ಆಗಮಿಸಿ, ನಂತರ ಸಂಜೆ ಕೋಲಾರ ನಗರಕ್ಕೆ ಆಗಮಿಸುವುದು ಹಾಗೂ ಸಂಜೆ ಸಾರ್ವಜನಿಕ ಸಭೆ ನಡೆಸಲಾಗುವುದು.13 ರಂದು ಕೋಲಾರದಿಂದ ಬಂಗಾರಪೇಟೆ ಮೂಲಕ ಕೆಜಿಎಫ್ ಗೆ ರೋಡ್ ಷೋ ನಡೆಯಲಿದ್ದು,ಸಂಜೆ ಮುಳಬಾಗಿಲಿನಲ್ಲಿ ಸಾರ್ವಜನಿಕರ ಸಭೆ ನಡೆಯಲಿದೆ . 14 ರಂದು ಶ್ರೀನಿವಾಸಪುರದ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪ್ರವೇಶಿಸಲಿದೆಯೆಂದು ತಿಒ.
ಕೋಲಾರ ಜಿಲ್ಲೆಯ ವಿಜಯ ಸಂಕಲ್ಪ ಯಾತ್ರೆಯು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ರವರ ನೇತೃತ್ವದಲ್ಲಿ ನಡೆಯಲಿದ್ದು,  ರಥಯಾತ್ರೆ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಎಸ್.ಬಿ.ಮುನಿವೆಂಟಪ್ಪ, ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ, ತಾಲೂಕು ಅಧ್ಯಕ್ಷ ಸಿ.ಡಿ. ರಾಮಚಂದ್ರ, ಕೆಂಬೋಡಿ ನಾರಾಯಣಸ್ವಾಮಿ, ಸತ್ಯನಾರಾಯಣ,ಪಿ.ಎಂ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!