• Tue. Apr 30th, 2024

ಕೋಲಾರ I ಯಾದವ ಬಾಲಕಿಯರ ವಿದ್ಯಾರ್ಥಿನಿಲಯ ಆರಂಭಿಸಲು ಅಗತ್ಯ ಕ್ರಮ ಸಮುದಾಯದ ಸಂಘಟನೆಗೆ ಒತ್ತು ನೀಡುವೆ-ವಕ್ಕಲೇರಿ ನಾರಾಯಣಸ್ವಾಮಿ

PLACE YOUR AD HERE AT LOWEST PRICE

ಕೋಲಾರ ಜಿಲ್ಲಾ ಯಾದವ ಸಮುದಾಯಕ್ಕೆ ಹೀಗಿರುವ ಬಾಲಕರ ವಿದ್ಯಾರ್ಥಿನಿಲಯದ ಜತೆಗೆ ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪಿಸುವ ಕುರಿತು ಅಗತ್ಯ ಕ್ರಮವಹಿಸುವುದಾಗಿಯೂ ಸಮುದಾಯದ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ ನೀಡುವಂತೆ ಕರ್ನಾಟಕ ಯಾದವ ಸಂಘದ ನೂತನ ಜಿಲ್ಲಾಧ್ಯಕ್ಷ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿ ಕೋರಿದರು.

ನಿಕಟ ಪೂರ್ವ ಅಧ್ಯಕ್ಷ ಗೋಕುಲ ನಾರಾಯಣಸ್ವಾಮಿ ಅವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ, ಅವರ ಸಹಕಾರ ಕೋರಿದ ಸಂದರ್ಭದಲ್ಲಿ ಅವರು, ತಮ್ಮ ಸಲಹೆಯಂತೆ ಯಾದವ ಸಮುದಾಯದ ಬಾಲಕಿಯರ ವಿದ್ಯಾರ್ಥಿನಿಲಯ ಆರಂಭಸುವ ಕುರಿತು ಕ್ರಮವಹಿಸುವ ಭರವಸೆ ನೀಡಿದರು.

ಶೈಕ್ಷಣಿಕವಾಗಿ, ರಾಜಕೀಯವಾಗಿ,ಆರ್ಥಿಕವಾಗಿ ಹಿಂದುಳಿದಿರುವ ಯಾದವ ಸಮುದಯದ ಕ್ಷೇಮಾಭಿವೃದ್ದಿ ಇಂದು ಅಗತ್ಯವಾಗಿದೆ, ನಾವು ಸಂಘಟಿತರಾಗದೇ ಯಾವುದೇ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವ ಕಾರ್ಯಕ್ಕೆ ಸಹಕಾರ ನೀಡುವಂತೆ ಜಿಲ್ಲೆಯ ಎಲ್ಲಾ ಯಾದವ ಸಮುದಾಯದ ಮುಖಂಡರಿಗೆ ಮನವಿ ಮಾಡಿದರು.
ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಗೋಕುಲ ವಿ.ನಾರಾಯಣಸ್ವಾಮಿ, ತಮ್ಮ ಅವಯಲ್ಲಿ ಕೈಲಾದಷ್ಟು ಅಭಿವೃದ್ದಿ ಕೆಲಸ ಮಾಡಲಾಗಿದೆ, ಯಾದವ ಸಮುದಾಯ ಭವನ ನಿರ್ಮಾಣವಾಗಿದೆ, ಬಾಲಕರ ವಿದ್ಯಾರ್ಥಿನಿಲಯವಿದ್ದು, ಬಾಲಕಿಯರ ವಿದ್ಯಾರ್ಥಿನಿಲಯದ ಅಗತ್ಯತೆಯೂ ಇದೆ ಎಂದು ಮನವರಿಕೆ ಮಾಡಿಕೊಟ್ಟರು.

ಯಾದವ ಸಮುದಾಯ ಭವನಕ್ಕೆ ಸುಣ್ಣ,ಬಣ್ಣ ಮಾಡಿಸಿ ಭವನವನ್ನು ಮತ್ತಷ್ಟು ಸುಸ್ಥಿತಿಯಲ್ಲಿಡಲು ಅಗತ್ಯ ಕ್ರಮವಹಿಸಲು ಸಲಹೆ ನೀಡಿದ ಅವರು, ಸಮುದಾಯದ ಯಾವುದೇ ಕಾರ್ಯಕ್ರಮಗಳಿಗೂ, ಅಭಿವೃದ್ದಿ ಚಟುವಟಿಕೆಗಳಿಗೂ ತಮ್ಮ ಪೂರ್ಣ ಬೆಂಬಲವಿದೆ ಎಂದು ತಿಳಿಸಿ, ಇಷ್ಟು ಕಾಲ ಸಮುದಾಯದ ಜಿಲ್ಲಾಧ್ಯಕ್ಷನಾಗಿ ಮಾಡಿದ ಕೆಲಸಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಮಾತನಾಡಿ, ಯಾದವ ಸಮುದಾಯ ತಮ್ಮ ನಡುವಿನ ಭಿನ್ನಾಭಿಪ್ರಾಯ ಬದಿಗಿಟ್ಟು, ಸಮುದಾಯದ ವೇದಿಕೆಗೆ ಬರಬೇಕು, ಸಂಘಟನೆ ಬಲಗೊಳ್ಳದಿದ್ದರೆ ನಮ್ಮ ಸಮುದಾಯದ ಕಡೆ ಯಾರೂ ತಿರುಗಿ ನೋಡುವುದಿಲ್ಲ ಎಂದ ಅವರು, ಗ್ರಾಮೀಣ ಪ್ರದೇಶದಲ್ಲಿರುವ ಯಾದವ ಸಮುದಾಯವನ್ನು ಮುಖ್ಯವಾಹಿನಿಗೆ ಕರೆತರುವ ಕೆಲಸವನ್ನು ನೂತನ ಅಧ್ಯಕ್ಷರು ಮಾಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪಿಡಿಒ ನಾಗರಾಜ್, ಸಮುದಾಯದ ಜಿಲ್ಲೆಯ ವಿವಿಧ ತಾಲ್ಲೂಕುಗಳ ಮುಖಂಡರಾದ ಮಾಲತಿ ರಾಧಾಕೃಷ್ಣ, ಜಿ.ಗಿರೀಶ್, ಎ.ಉಮೇಶ್, ವೇಣುಗೋಪಾಲ್, ರಮೇಶ್ ಮತ್ತಿತರರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!