• Fri. May 3rd, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ಮುಂಜಾನೆ ಜವರಾಯನ ಅಟ್ಟಹಾಸಕ್ಕೆ ದಂಪತಿಗಳಿಬ್ಬರು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಬಿದ್ದಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ದಂಪತಿಗಳು ಮರಣಹೊಂದಿದ್ದಾರೆ.

ಮಗಳು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಮಗಳನ್ನು ಬೆಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಟ್ಟು ಅಂದ್ರಪ್ರದೇಶದ ಮದನಪಲ್ಲಿಗೆ ತೆರಳುವ ವೇಳೆ ಘಟನೆ ನಡೆದಿದೆ. ಅಪಘಾತದಲ್ಲಿ ಮದನಪಲ್ಲಿ ಗ್ರಾಮದ ಶಫಿ (55) ಶಮಾ (40) ಮೃತ ದಂಪತಿಗಳೆಂದು ತಿಳಿದು ಬಂದಿದ್ದು ಕ್ರೇನ್ ಸಹಾಯದೊಂದಿಗೆ ಕಾರು ಮೇಲತ್ತಲಾಗಿದೆ.

ಮೃತ ದೇಹಗಳನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!