• Sat. May 18th, 2024

PLACE YOUR AD HERE AT LOWEST PRICE

ಕೆಜಿಎಫ್:ಕೆಜಿಎಫ್ ತಾಲ್ಲೂಕಿನಲ್ಲಿ ರೈತರ ವಿದ್ಯುತ್ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಬೇತಮಂಗಲ ವಿದ್ಯುತ್ ಇಲಾಖೆಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಬೇತಮಂಗಲದ ವಿದ್ಯುತ್ ಇಲಾಖೆಗೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ವಿದ್ಯುತ್ ಇಲಾಖೆಯಿಂದ ಇತ್ತೀಚಿಗೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಕೆಜಿಎಫ್ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ರೈತರು ಕೊಳವೆ ಬಾವಿಯ ನೀರಿನಿಂದಲ್ಲೇ ಕೃಷಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ, ಇತರೆ ಹಲವು ಕಾರಣಗಳಿಂದ ವಿದ್ಯುತ್ ಸಮಸ್ಯೆಯಾದರೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ವಡ್ಡಹಳ್ಳಿ ಮಂಜುನಾಥ್, ಕರಗ ನಾರಾಯಣಸ್ವಾಮಿ, ಕೆಜಿಎಫ್ ತಾಲ್ಲೂಕು ಅಧ್ಯಕ್ಷ ಜಗದೀಶ್ ಕುಮಾರ್, ಉಪಾಧ್ಯಕ್ಷ ಜನಾರ್ಧನ್, ಗೌರವಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಕಾರಿ ಮಂಜುನಾಥ್ ಮೊದಲಾದವರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!