• Sat. May 18th, 2024

ಕೋಲಾರ I ಜನತೆಗೆ ಸತ್ಯ ತಿಳಿಸಲು ಏ .೫ ಕೋಲಾರಕ್ಕೆ ರಾಹುಲ್‌ ಗಾಂಧಿ-ಕೆ.ಎಚ್‌.ಮುನಿಯಪ್ಪ

PLACE YOUR AD HERE AT LOWEST PRICE

ಪ್ರಜಾಪ್ರಭುತ್ವ ಉಳಿವಿಗಾಗಿ ಹಾಗೂ ಜನತೆಗೆ ಸತ್ಯ ತಿಳಿಸಲು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಏಪ್ರಿಲ್ ೫ ರಂದು ಕೋಲಾರಕ್ಕೆ ಆಗಮಿಸಿಲಿದ್ದಾರೆಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ೨೦೧೯ ರ ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ಮೋದಿ ಜನಾಂಗ ಕಳ್ಳರು ಎಂಬ ಪದ ಬಳಿಸಿದ ಹಿನ್ನಲೆಯಲ್ಲಿ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದು, ಇದರ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯವರಿಗೆ ಕೋರ್ಟ್ ಶಿಕ್ಷೆ ನೀಡಿದೆ, ಈ ಹಿನ್ನಲೆಯಲ್ಲಿ ಜನತೆಗೆ ಸತ್ಯ ತಿಳಿಸಲು ಅವರು ಕೋಲಾರಕ್ಕೆ ಬರುತ್ತಿದ್ದಾರೆ ಎಂದರು.

ಈ ಸಣ್ಣ ವಿಚಾರವನ್ನು ಇಟ್ಟುಕೊಂಡು ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಅಪಮಾನ ಮಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಡೀ ದೇಶ ತಲೆ ತಗ್ಗಿಸುವಂತೆ ಮಾಡಿದೆ ಯೆಂದರು.

ರಾಹುಲ್ ಗಾಂಧಿಯವರು ದೇಶದ ಏಕತೆಗಾಗಿ ಭಾರತ್ ಜೋಡೋ ನಡೆಸಿದ ಮೇಲೆ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿರುವುದನ್ನು ಸಹಿಸಲಾಗದೆ ಭಯಗೊಂಡಿರುವ ಬಿ.ಜೆ.ಪಿ ಮುಖಂಡರುಗಳು ರಾಹುಲ್ ಗಾಂಧಿಯವರನ್ನು ಜೈಲಿಗೆ ಕಳುಹಿಸಿ ಕಾಂಗ್ರೆಸ್‌ನ ವರ್ಚಸ್ಸನ್ನು ಕಡಿಮೆ ಗೊಳಿಸಲು ಚಿಂತನೆ ನಡೆಸಿದ್ದಾರೆ ಎಂದು ಕಿಡಿಕಾರಿದರು.

ತಮಗೆ ಅನುಕೂಲ ಇರುವ ನ್ಯಾಯಾಧೀಶರ ಮೂಲಕ ಎರಡು ವರ್ಷ ಶಿಕ್ಷೆಗೆ ಒಳಪಡಿಸಿ ನ್ಯಾಯಾಲಯದ ಆದೇಶ ಬರುವುದಕ್ಕೆ ಮೊದಲೇ ಲೋಕಸಭೆ ಸ್ಪೀಕರ್ ಮೇಲೆ ಒತ್ತಡ ಹಾಕಿ ರಾಹುಲ್ ಗಾಂಧಿಯವರನ್ನು ಸಂಸದರ ಸ್ಥಾನದಿಂದ ಅನರ್ಹತೆ ಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರಲ್ಲದೆ ಕೇರಳದ ವಯನಾಡಿನಲ್ಲಿ ಉಪ ಚುನಾವಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದು ಈ ಎಲ್ಲಾ ಘಟನೆಗಳ ಬಗ್ಗೆ ದೇಶದ ಅನೇಕ ರಾಜಕೀಯ ಮುಖಂಡರುಗಳು ಖಂಡಿಸಿದ್ದಾರೆಂದರು.

ಬಿ.ಜೆ.ಪಿ ಸರ್ಕಾರ ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಂಡಿದ್ದು,ಮಾಡಿದ್ದುಣ್ಣೋ ಮಾರಾಯ ಎಂಬಂತೆ ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಮೋದಿರವರು ಮನೆ ಸೇರಲಿದ್ದು, ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲಿದೆಯೆಂದರು.

ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಸಮಾವೇಶ ಮಾಡುವಂತೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು ಸೂಚನೆ ನೀಡಿದ್ದು, ಅದರಂತೆ ಏಪ್ರಿಲ್ ೫ ರಂದು ಕೋಲಾರದಲ್ಲಿ ಸೂಕ್ತ ಸ್ಥಳ ನಿಗದಿಪಡಿಸಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು ಒಂದು ಲಕ್ಷ ಜನ ಸೇರಿಸುವ ಮೂಲಕ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ ಮುಖಂಡರುಗಳು ಭಾಗವಹಿಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಚಾರ ಸಮಿತಿ ಸಂಚಾಲಕ ಎಲ್.ಎ.ಮಂಜುನಾಥ್, ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪ್ರಸಾದ್ ಬಾಬು,ಉದಯಶಂಕರ್,ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್,ಎಸ್.ಟಿ.ಘಟಕದ ಜಿಲ್ಲಾ ಅಧ್ಯಕ್ಷ ನಾಗರಾಜ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರತ್ನಮ್ಮ,ಮಾಜಿ ಜಿಲ್ಲಾಧ್ಯಕ್ಷ ಬಿಸ್ಸೇಗೌಡ, ರಾಮ್‌ಪ್ರಸಾದ್, ಮುರಳಿಗೌಡ,ಇಕ್ಬಾಲ್, ಲಾಲ್‌ಬಹುದ್ದೂರ್ ಶಾಸ್ತ್ರೀ,ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

 

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!