• Fri. May 3rd, 2024

PLACE YOUR AD HERE AT LOWEST PRICE

ಅಣ್ಣಾವ್ರು ಇಹಲೋಕ ತ್ಯಜಿಸಿ ಇಂದಿಗೆ ೧೭ ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಡಾ.ರಾಜ್‌ಕುಮಾರ್ ಅವರನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪಿ.ನಾರಾಯಾಣಪ್ಪ ಅಭಿಪ್ರಾಯಪಟ್ಟರು.

ಕೋಲಾರ ನಗರದ ಕುವೆಂಪು ಉದ್ಯಾನವನದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತಾನಾಡುತ್ತಾ, ತಮ್ಮ ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಪುಣ್ಯತಿಥಿಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ “ಅಣ್ಣಾವ್ರು” ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ವರನಟ ಅಜರಾಮರರಾಗಿದ್ದಾರೆ ಎಂದರು.

ನಿವೃತ್ತ ಎಎಸ್‌ಐ ರವೀಂದ್ರನಾಥ್ ಮಾತಾನಾಡಿ, ಇಂದು ಕನ್ನಡ ಚಿತ್ರರಂಗದ ವರನಟ, ನಟ ಅಣ್ಣಾವ್ರು ಇಹಲೋಕ ತ್ಯಜಿಸಿ ಇಂದಿಗೆ ೧೭ ವರ್ಷಗಳಾಗಿವೆ. ಆಗಿನ ಗೋಕಾಕ್ ಚಳುವಳಿಯ ದಿನಗಳನ್ನು ನೆನಪಿಸುತ್ತಾ ಅವರ ಕನ್ನಡಪರ ಹೋರಾಟಗಳನ್ನು ನೆನಪಿಸಿದರು.

ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಶಿವಕುಮಾರ್ ಮಾತಾನಾಡಿ ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಪುಣ್ಯತಿಥಿಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ ಅಣ್ಣಾವು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.

ಕವಿ ರವೀಂದ್ರಸಿಂಗ್ ಮಾತಾನಾಡಿ, ಡಾ.ರಾಜ್‌ಕುಮಾರ್ ಪುಣ್ಯಸ್ಮರಣೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ವರನಟ ನೆಂದು ಅಜರಾಮರವಾಗಿದ್ದಾರೆ.

ಡಾ.ರಾಜ್‌ಕುಮಾರ್ ಪುಣ್ಯಸ್ಮರಣೆ ಈ ದಿನದ ಅಂಗವಾಗಿ ಅಭಿಮಾನಿಗಳು ಅನ್ನದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಪೋಸ್ಟ್ ನಾರಾಯಣಸ್ವಾಮಿ, ಪೋಲಿಸ್ ವೆಂಕಟರಮಣಪ್ಪ, ಡಾ.ಶರಣಪ್ಪಗಬೂರ್, ಟೈಗರ್ ಪೋಲಿಸ್ ವೆಂಕಟೇಶ್, ಮಾಸ್ತೇನಹಳ್ಳಿ ನಾರಾಯಣಸ್ವಾಮಿ, ಆರ್.ರವಿ, ಕೆಎಸ್‌ಆರ್‌ಟಿಸಿ ಶಿವಕುಮಾರ್, ಬೆಮಲ್ ನಿವೃತ್ತ ಇಂಜಿನಿಯರ್ ಶ್ರೀನಿವಾಸ್, ಶ್ರೀರಾಮ್ ಮುಂತಾದವರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!