• Wed. May 15th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಂಗಾರಪೇಟೆ ಮತ್ತು ಕ್ಯಾಸಂಬಳ್ಳಿ ಪೊಲೀಸ್ ಠಾಣೆಗಳ ಕಟ್ಟಡಗಳನ್ನು ಕೇಂದ್ರ ವಲಯ ಐಜಿಪಿ ಡಾ|| ಬಿ.ಆರ್. ರವಿಕಾಂತೇಗೌಡ ಉದ್ಗಾಟಿಸಿ, ಸಾರ್ವಜನಿಕ ಉಪಯೋಗಕ್ಕೆ ಲೋಕಾರ್ಪಣೆ ಮಾಡಿದರು.

ಈ ವೇಳೆ ಅವರು ಮಾತನಾಡಿ, ಕಳೆದ ಒಂದು ದಶಕದಿಂದ ಪೊಲೀಸ್ ಠಾಣೆಗಳ ಉತ್ತಮ ಕಟ್ಟಡಗಳನ್ನು ನಿರ್ಮಿಸುವಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮುಂದಾಗಿದೆ. ರಾಜ್ಯದಾದ್ಯಂತ ಪ್ರತಿ ವರ್ಷ ನೂರಾರು ನೂತನ ಪೊಲೀಸ್ ಠಾಣಾ ಕಟ್ಟಡಗಳನ್ನು ಪೊಲೀಸ್ ವಸತಿ ನಿಗಮದ ವತಿಯಿಂದ ನಿರ್ಮಿಸಿ ಲೋಕಾರ್ಪಣೆ ಮಾಡಲಾಗುತ್ತಿದೆ.

ಅದರಂತೆ, ಕೆಜಿಎಫ್‍ನಲ್ಲೂ ಪ್ರಸ್ತುತ ಬಂಗಾರಪೇಟೆ ಮತ್ತು ಕ್ಯಾಸಂಬಳ್ಳಿ ಪೊಲೀಸ್ ಠಾಣೆಗಳಿಗೆ ಹೊಸದಾಗಿ  ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಠಾಣೆಗೆ ಬರುವಂತಹ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಕರೆ ನೀಡಿದರು.

ಪೊಲೀಸರು ಕರ್ತವ್ಯದಲ್ಲಿರುವಾಗ ತಾಳ್ಮೆಯನ್ನು ಮೈಗೂಡಿಸಿಕೊಂಡು, ಸಾರ್ವಜನಿಕರ ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ತಮ್ಮ ಸೇವೆಯನ್ನು ದಕ್ಷತೆಯಿಂದ, ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹೊಸ ಪೊಲೀಸ್ ಠಾಣಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಐಜಿಪಿ ರವಿಕಾಂತೇಗೌಡರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ಎಂ.ನಾರಾಯಣ, ಪೊಲೀಸ್ ವಸತಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ.ಧರಣೀದೇವಿ ಮಾಲಗತ್ತಿ ಡಿವೈಎಸ್ಪಿ ವಿ.ಎಲ್.ರಮೇಶ್ ಬಂಗಾರಪೇಟೆ ಪೊಲೀಸ್ ನೀರೀಕ್ಷಕ ಸಂಜೀವರಾಯಪ್ಪ ಮೊದಲಾದವರುದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!