PLACE YOUR AD HERE AT LOWEST PRICE
ಮುಳಬಾಗಿಲು:ನಗರಸಭೆಯ ಕಛೇರಿಯಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಮುಖ್ಯಾಧಿಕಾರಿ ಶ್ರೇಣಿ-೧ ಅಮರನಾರಾಯಣ ಅವರನ್ನು ಪೌರಾಯುಕ್ತ ವಿ.ಶ್ರೀಧರ್, ನಗರಸಭೆ ಮಾಜಿ ಅಧ್ಯಕ್ಷ ರಿಯಾಜ್ ಅಹಮದ್ ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಪೌರಾಯುಕ್ತ ವಿ.ಶ್ರೀಧರ್ ಮಾತನಾಡಿ, ಹಲವಾರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಉತ್ತಮ ರೀತಿಯಲ್ಲಿ ಸುಮಾರು ೩೨ ವರ್ಷಗಳ ಕಾಲ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ ಹೊಂದಿದ್ದು, ನಿಮಗೆ ಹಾಗೂ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ಹಾಗೂ ದೀರ್ಘ ಆಯಸ್ಸು ನೀಡಲೆಂದು ಹಾರೈಸಿದರು.
ನಗರಸಭೆ ಮಾಜಿ ಅಧ್ಯಕ್ಷ ರಿಯಾಜ್ ಅಹಮದ್, ಕಛೇರಿಯ ವ್ಯವಸ್ಥಾಪಕ ವೇಣು ಗೋಪಾಲ್, ಹಿರಿಯ ಆರೋಗ್ಯ ನಿರೀಕ್ಷಕಿ ಪ್ರತಿಭಾ ಮತ್ತು ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.