• Tue. May 14th, 2024

PLACE YOUR AD HERE AT LOWEST PRICE

ಮುಳಬಾಗಿಲು:ಹೊಟ್ಟೆ ನೋವು ತಾಳಲಾರದೇ ಮಹಿಳೆಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಲಕ್ಷ್ಮಿದೇವಿ (52), ಮೃತಪಟ್ಟ ಮಹಿಳೆಯಾಗಿದ್ದು, ರಾಮಪ್ಪ ಎಂಬುವರ ಪತ್ನಿಯಾದ ಲಕ್ಷ್ಮಿದೇವಿ ಹಲವಾರು ವರ್ಷಗಳಿಂದ ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ಮಾನಸಿಕವಾಗಿ ನೊಂದಿದ್ದಳು.

ಇತ್ತೀಚಿನ ದಿನಗಳಲ್ಲಿ ಪದೇ ಪದೇ ಬಾದಿಸುತ್ತಿದ್ದ ಹೊಟ್ಟೆ ನೋವಿನಿಂದ ಮತ್ತಷ್ಟು ಮನನೊಂದಿದ್ದು ಮಂಗಳವಾರ ಮುಂಜಾನೆ ಗ್ರಾಮದ ಅಂಚಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪತಿ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯ ಪಿಎಸ್‌ಐ ವಿಠಲ್‌ತಳವಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!