• Sun. May 19th, 2024

PLACE YOUR AD HERE AT LOWEST PRICE

ತಮಿಳುನಾಡಿಗೆ ಮುಂದಿನ ಹದಿನೆಂಟು ದಿನಗಳ ಕಾಲ 3,000 ಕ್ಯೂಸೆಕ್ಸ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಆಘಾತಕಾರಿಯಾದುದು. ಈ ಬಗ್ಗೆ ಕಾನೂನು ತಂಡದ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕ ಎದುರಿಸುತ್ತಿರುವ ಮಳೆ ಕೊರತೆಯ ಅಂಕಿ-ಅಂಶ, ಜಲಾಶಯಗಳ ನೀರಿನ ಸಂಗ್ರಹ ಮತ್ತು ರೈತರ ಬೆಳೆಗೆ ಮತ್ತು ಕುಡಿಯುವ ನೀರು ಪೂರೈಸಲು ಅವಶ್ಯಕತೆ ಇರುವ ನೀರಿನ ಪ್ರಮಾಣದ ಸಂಪೂರ್ಣ ವಿವರವನ್ನು ನಮ್ಮ ಅಧಿಕಾರಿಗಳು ಸಮಿತಿಗೆ ನೀಡಿದ್ದಾರೆ. ಇದರ ನಂತರವೂ ಸಮಿತಿ ಇಂತಹ ನಿರ್ಧಾರಕ್ಕೆ ಬಂದಿರುವುದು ಅಚ್ಚರಿ ಉಂಟು ಮಾಡಿದೆ.

ನೀರು ಹಂಚಿಕೆಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಅಂತರರಾಜ್ಯ ಜಲವಿವಾದ ಕಾಯ್ದೆ ಸ್ಪಷ್ಟವಾಗಿ ಹೇಳಿದೆ. ನಾವು ಕಳೆದ ಒಂದು ತಿಂಗಳಿನಿಂದ ಪ್ರಧಾನಿ ಮಧ್ಯಸ್ಥಿಕೆಗಾಗಿ ಮನವಿ ಮಾಡುತ್ತಿದ್ದೇವೆ. ಅವರ ಭೇಟಿಗಾಗಿ ಅವಕಾಶ ಕೋರಿದ್ದೇವೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡಾ ಪತ್ರ ಬರೆದಿದ್ದಾರೆ.

ಇದು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದವಾದ ಕಾರಣ ಕೇಂದ್ರ ಸರ್ಕಾರ ಮಾತ್ರ ಮಧ್ಯಸ್ಥಿಕೆ ವಹಿಸಿ ಪರಿಹರಿಸಲು ಸಾಧ್ಯವಿದೆ. ಹಿಂದೆ ಇಂತಹದ್ದೇ ಪರಿಸ್ಥಿತಿ ಉದ್ಭವಿಸಿದಾಗ ವಾಸ್ತವಾಂಶವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ತಜ್ಞರ ತಂಡವನ್ನು ಕಳಿಸಿದ್ದ ನಿದರ್ಶನಗಳಿವೆ.

ಕೇಂದ್ರ ಸರ್ಕಾರ ಈಗಲಾದರೂ ಮಧ್ಯಪ್ರವೇಶ ಮಾಡಿ ಈ ಬಿಕ್ಕಟ್ಟನ್ನು ಪರಿಹರಿಸಬೇಕೆಂದು ಆಗ್ರಹಿಸುತ್ತೇನೆ.

– ಮುಖ್ಯಮಂತ್ರಿ Siddaramaiah

#ಕಾವೇರಿನೀರು

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!