• Tue. May 21st, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಕೊಡುವ ಮಹತ್ವದ ಯೋಜನೆಯಾದ ಎರಗೋಳ ಯೋಜನೆಯನ್ನು ನವಂಬರ್ 10ರಂದು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಈ ಯೋಜನೆಯ ಲೋಕಾರ್ಪಣೆಗೆ ಮುಂಖ್ಯಮಂತ್ರಿಗಳ ಜೊತೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹಮಂತ್ರಿ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಕೃಷ್ಣ ಬೈರೇಗೌಡ, ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಅಧಿಕಾರಿಗಳು ಮತ್ತು ಸುಮಾರು 25,000 ಜನ ಸಾರ್ವಜನಿಕರು ಸೇರಲಿದ್ದಾರೆ. ಇಂದು ಅದಕ್ಕಾಗಿ ಎಲ್ಲಾ ವ್ಯವಸ್ಥೆಯನ್ನು ಮಾಡುವುದಕ್ಕೆ ಪೂರ್ವಭಾವಿ ಸಭೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಗೌಡ, ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಮುಖಂಡರಾದ ಚಂದು, ಚಿಕ್ಕ ವಲಗಮಾದಿ ಮುನಿರಾಜು, ಬೂದಿಕೋಟೆಯ ಬಾಬು, ಗೋಪಾಲರೆಡ್ಡಿ, ಪಿಚ್ಚಹಳ್ಳಿ ಗೋವಿಂದರಾಜು, ಶಮ್ಸುದ್ದೀನ್ ಬಾಬು, ಎಚ್ ಕೆ ನಾರಾಯಣಸ್ವಾಮಿ, ಮಹದೇವಪ್ಪ, ಸುಹೇಲ್, ಮೊದಲಾದವರು ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!