• Thu. May 16th, 2024

PLACE YOUR AD HERE AT LOWEST PRICE

ಗಾಜಾದಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಮಾನವೀಯ ಒಪ್ಪಂದ ಕುರಿತು ಜೋರ್ಡಾನ್ ಮಂಡಿಸಿದ ಕದನ ವಿರಾಮದ ನಿರ್ಣಯಕ್ಕೆ ಮತ ಚಲಾಯಿಸದೇ ಭಾರತ ದೂರ ಉಳಿದಿದೆ.

ಗಾಜಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಯನ್ನು ಎತ್ತಿಹಿಡಿಯುವುದು’ ಎನ್ನುವ ಘೋಷ ವಾಕ್ಯದೊಂದಿಗೆ ಜೋರ್ಡಾನ್ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯು ಶುಕ್ರವಾರ ಪ್ರಕಟಿಸಿತ್ತು.

ಮಾನವೀಯ ನೆಲೆಯದಲ್ಲಿ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕೆನ್ನುವ ವಿಶ್ವಸಂಸ್ಥೆಯ ಈ ನಿರ್ಣಯಕ್ಕೆ 121 ಸದಸ್ಯ ರಾಷ್ಟ್ರಗಳು ಸಮ್ಮತಿಸಿದರೆ, 14 ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿದವು. 44 ದೇಶಗಳು ಈ ನಿರ್ಣಯದಿಂದ ಹೊರಗುಳಿದಿದ್ದು, ಅದರಲ್ಲಿ ಭಾರತವೂ ಒಂದಾಗಿದೆ. ಭಯೋತ್ಪಾದನಾ ಕೃತ್ಯಗಳನ್ನು ಸಮರ್ಥಿಸಿಕೊಳ್ಳಬಾರದು ಎಂದು ಭಾರತ ತಿಳಿಸಿದೆ.

ವಿಶ್ವಸಂಸ್ಥೆ ರಾಯಭಾರ ಕಚೇರಿಗೆ ಭಾರತದ ಕಾಯಂ ಪ್ರತಿನಿಧಿ ಯೋಜ್ನಾ ಪಟೇಲ್ ಭಾರತದ ನಿರ್ಣಯದ ಬಗ್ಗೆ ಮಾತನಾಡಿದ್ದು, ‘ಮಾನವೀಯತೆಗೆ ಭಯೋತ್ಪಾದನೆ ಒಂದು ಪಿಡುಗಾಗಿದ್ದು, ಅದಕ್ಕೆ ಯಾವುದೇ ಗಡಿ, ರಾಷ್ಟ್ರೀಯತೆ, ಜನಾಂಗದ ಮಿತಿಯಿಲ್ಲ.

ಭಯೋತ್ಪಾದಕ ಕೃತ್ಯಗಳನ್ನು ಜಗತ್ತು ಸಮರ್ಥಿಸಿಕೊಳ್ಳಬಾರದು. ಈ ವಿಷಯದಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ನಾವೆಲ್ಲ ಒಂದಾಗಬೇಕಿದೆ. ಭಯೋತ್ಪಾದನೆ ವಿಚಾರವಾಗಿ ಶೂನ್ಯ ಸಹಿಷ್ಟುತೆಯನ್ನು ಹೊಂದಬೇಕಿದೆ’ ಎಂದಿದ್ದಾರೆ.

193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿವೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!