• Tue. May 21st, 2024

PLACE YOUR AD HERE AT LOWEST PRICE

ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ!

ಕೋಲಾರ,ನವೆಂಬರ್.೧೨ : ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೦೫ ರಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡಲು ಒತ್ತಾಯಿಸಿ ಕರ್ನಾಟಕ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ಪ್ರಧಾನ ಕಾರ್ಯದರ್ಶಿ ನಾಗನಾಳ ಮುನಿಯಪ್ಪ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಶನಿವಾರ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಡ್ಯಾಂ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲೇ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸ್ಪಂಧಿಸಿದ ಆಗಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದರು. ತದನಂತರ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಬಗ್ಗೆ ಘೋಷಣೆ ಮಾಡಿತ್ತು.

ಇಂದು ಯರಗೋಳ್ ಡ್ಯಾಂ ಉದ್ಘಾಟನೆಗೆ ಬಂದ ವೇಳೆ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿದ ಒಕ್ಕುಟದವರು ಸದರಿ ವಿಷಯವನ್ನು ನೆನಪಿಸಿ ಖಾಯಂಮಾತಿ ಮಾಡುವ ಕುರಿತು ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಕಾದು ನೋಡಿ ಎಂದು ಹೇಳಿ ಹೊರಟು ಹೋದರು.

ಮುಖ್ಯಮಂತ್ರಿಗಳು ಕಾದು ನೋಡಿ ಎಂದು ಹೇಳಿದ್ದು, ಆಶ್ವಾಸನೆಯೋ ಅಥವಾ ಅಡ್ಡಗೋಡೆ ಮೇಲೆ ದೀಪವೋ ಎಂಬ ಗೊದಂಲಕ್ಕೆ ಸಿಲುಕಿದ ಉಪನ್ಯಾಸಕರು ಗೊಂದಲಕ್ಕೊಳಗಾಗಿದ್ದಾರೆ.

 

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!