• Fri. May 17th, 2024

PLACE YOUR AD HERE AT LOWEST PRICE

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ:ಹವಾಮಾನ ಇಲಾಖೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡಿ.3ರಂದು ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.

ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!