• Wed. May 15th, 2024

PLACE YOUR AD HERE AT LOWEST PRICE

ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ.

ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇತ್ತ ರಮೇಶ್‌ ಕುಮಾರ್‌ ಬಣ ಕೂಡ ಪಟ್ಟು ಹಿಡಿದಿದ್ದು, ಅವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಕೆಲಸವೇ ಮಾಡುವುದಿಲ್ಲ ಎಂಬ ಸಂದೇಶ ಸಾರಿದ್ದರು.

ಮುನಿಯಪ್ಪ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡುವುದಕ್ಕೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಶಾಸಕ ಕೊತ್ತೂರು ಮಂಜುನಾಥ್‌ ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಸೇರಿದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕೆ ಇಳಿಸಬೇಕು ಎಂದು ರಮೇಶ್‌ ಕುಮಾರ್ ಬಣದವರು ಒತ್ತಡ ಹೇರಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ತಮ್ಮದು ಎಂದು ಕೇಂದ್ರ ನಾಯಕರಿಗೆ ಭರವಸೆ‌ ನೀಡಿದ್ದರು. ರಮೇಶ್‌ ಕುಮಾರ್‌ ಬಣ ಕೋಲಾರದಲ್ಲಿ ಮೇಲುಗೈ ಸಾಧಿಸಿದೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!