• Tue. May 21st, 2024

PLACE YOUR AD HERE AT LOWEST PRICE

ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

ಕೋಲಾರ: ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ದಸಂಸ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳನ್ನು ಸೋಲಿಸಿ, ಕಾಂಗ್ರೆಸ್‌ಗೆ ಬೆಂಬಲಿಸುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದರು.

ದೇಶದಲ್ಲಿ ಕೆಳ ಸಮುದಾಯದವರು, ಮಹಿಳೆಯರು, ಕಾರ್ಮಿಕರು ಬದುಕಲು, ಸಂವಿಧಾನದ ಬಹುತ್ವವನ್ನು ಪುನರ್‌ ಸ್ಥಾಪಿಸಬೇಕು. ಇದಕ್ಕಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ತಿಳಿಸಿದರು.

ದಸಂಸ ಜಿಲ್ಲಾ ಸಂಚಾಲಕ ಎಂ.ರಾಮಪ್ಪ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ದಲಿತರ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನ ನಿಲ್ಲಿಸಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂಬ ಬಹಿರಂಗ ಹೇಳಿಕೆ ನೀಡಿದ್ದಾರೆ. ಜನರು ಜಾಗೃತಿಯಾಗಬೇಕಿದೆ ಬಿಜೆಪಿ ಯನ್ನು ಸೋಲಿಸಬೇಕಿದೆ ಎಂದು ಮನವಿ ಮಾಡಿದರು.

ದಸಂಸ ರಾಜ್ಯ ಕಲಾಮಂಡಳಿ ಅಧ್ಯಕ್ಷ ಕಲಾವಿದ ಯಲ್ಲಪ್ಪ ಮಾತನಾಡಿ, ಈಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಾಯಿಸಿ ಹಿಂದೂ ಧರ್ಮದ ಹೆಸರಿನಲ್ಲಿ ಧರ್ಮ ಸಂಸತ್ ಸ್ಥಾಪಿಸಿ, ಮೇಲ್ಜಾತಿಯ ಹಿಡಿತವನ್ನು ಮರುಸ್ಥಾಪಿಸುವುದು ಬಿಜೆಪಿಯ ಗುರಿಯಾಗಿದೆ. ಕೋಮುವಾದ ಮಾಡುವ ಪಕ್ಷವನ್ನು ಸೋಲಿಸಿ, ಪ್ರತಿ ಗ್ರಾಮಗಳಿಗೆ ಹೋಗಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶ ಅಭಿವೃದ್ಧಿ ಹಾಗೂ ಶಾಂತಿಯಾಗಿರಲು ಸಾಧ್ಯವೆಂದು ಅರಿವು ಮೂಡಿಸಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಬೆನಗಾನಹಳ್ಳಿ ರಾಮಚಂದ್ರಪ್ಪ, ಮಾರುತಿಪ್ರಸಾದ್, ಲಕ್ಷ್ಮೀ, ಬಸಪ್ಪ ಇತರರು ಉಪಸ್ಥಿತರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!