• Fri. Oct 18th, 2024

PLACE YOUR AD HERE AT LOWEST PRICE

ಬಂಗಾರಪೇಟೆ: ನಿವೃತ್ತಿ ಹೊಂದಿದ ಬಿಸಿಯೂಟ ನೌಕರರಿಗೆ ಇಡಿಗಂಟು ಕೂಡಲೇ ಜಾರಿಗೆ ತರುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.15ರಿಂದ ಬಿಸಿಯೂಟ ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳುವಳಿಕೆ ಪತ್ರ ಸಲ್ಲಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡು, ಅವಿಭಜಿತ ತಾಲ್ಲೂಕು ಅಧ್ಯಕ್ಷೆ ಎಂ.ಜಯಲಕ್ಷ್ಮಿ  ಮಾತನಾಡಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 2023ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆದಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿರ್ದೇಶಕರು ಮತ್ತು ಸಂಘಟನೆ ಮುಖಂಡರೊಂದಿಗೆ 04-11-2023ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆದಿದ್ದು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

10-11-2023ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆದಿದೆ.  15-11-2023ರಂದು ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು.

ಜೊತೆಗೆ ಹೋರಾಟವನ್ನು ವಾಪಸ್ಸು ಪಡೆಯಲು ಕೋರಿದ್ದರಿಂದ ಇಲಾಖೆಯ ಮಾತಿಗೆ ಗೌರವಿಸಿ ಹೋರಾಟವನ್ನು ವಾಪಸ್ಸು ಪಡೆಯಲಾಗಿತ್ತು ಎಂದರು.

2022ರಿಂದ 2024ರವರೆಗೆ 10.500ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ 3-4 ಹಂತದ ಹೋರಾಟಗಳು ನಡೆದಿವೆ. ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಚಿವರ ಜೊತೆ ಜಂಟಿ ಸಭೆಗಳನ್ನು ನಡೆಸಲಾಗಿದೆ.

ಹೋರಾಟದ ಸಂದರ್ಭದಲ್ಲಿ ಮಾತುಕತೆ ನಡೆಸಿದಂತೆ ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ಅಡುಗೆ ನೌಕರರಿಗೆ ಇಡಿಗಂಟು ಜಾರಿ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು.

ಆದರೆ ಇದುವರೆಗೂ ಇದ್ಯಾವುದೂ ಜಾರಿ ಆಗಿರುವುದಿಲ್ಲ. ಜಾರಿ ಆಗುವವರೆಗೆ ಯಾವುದೇ ನೌಕರರನ್ನು ಕೆಲಸದಿಂದ ಕೈ ಬಿಡಬಾರದು ಎಂದು ಒತ್ತಾಯಿಸುತ್ತಾ, ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಅನಿವಾರ್ಯವಾಗಿ ಜುಲೈ 15-2024ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಂಜುಳ, ಸಂಘಟನಾ ಕಾರ್ಯದರ್ಶಿ ಸವಿತಾ ಶೇಖರಪ್ಪ, ಉಪಾಧ್ಯಕ್ಷೆ ವಿಜಯಕುಮಾರಿ, ಕೂಳೂರು ಮಂಜುಳ, ಪದ್ಮಾವತಿ, ಗುಣಮಣಿ, ರತ್ನಮ್ಮ, ಸಹ ಕಾರ್ಯದರ್ಶಿಗಳಾದ ಭಾರತಿ, ಗೌರಮ್ಮ, ನೀಲಮ್ಮ ಹಾಗೂ ಇನ್ನಿತರರು ಇದ್ದರು.

Related Post

ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ 
ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ, ಎಲ್ಲಾ ಸಮುದಾಯಗಳಿಗೆ ಆದರ್ಶ: ಬೈರತಿ ಸುರೇಶ್
ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ

Leave a Reply

Your email address will not be published. Required fields are marked *

You missed

error: Content is protected !!