• Fri. Oct 18th, 2024

PLACE YOUR AD HERE AT LOWEST PRICE

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ ಆರು ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಟಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ” ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.

ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

Related Post

ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ ಕೇಳಲು ಗುತ್ತಿಗೆದಾರರಿಗೆ ನೈತಿಕತೆ ಇಲ್ಲ – ಎಂ.ಎಸ್.ನಾರಾಯಣಸ್ವಾಮಿ
ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ

Leave a Reply

Your email address will not be published. Required fields are marked *

You missed

error: Content is protected !!